ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ ಸಿಂಗ್‌ ಚೌಹಾಣ್‌ ವಿರುದ್ಧ ದಿಗ್ವಿಜಯ್‌ ಸಿಂಗ್‌ ದೂರು

ರಾಹುಲ್‌ ಗಾಂಧಿ ಅವರ ಬಗ್ಗೆ ತಿರುಚಿದ ವಿಡಿಯೊ ಹಾಕಿದ ಆರೋಪ
Last Updated 17 ಜೂನ್ 2020, 12:49 IST
ಅಕ್ಷರ ಗಾತ್ರ

ಭೋಪಾಲ್‌: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಬಗ್ಗೆ ತಿರುಚಿದ ವಿಡಿಯೊವೊಂದನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಲಿಖಿತ ದೂರು ದಾಖಲಿಸಿದ್ದಾರೆ.

ಮದ್ಯಪಾನಕ್ಕೆ ಪ್ರೋತ್ಸಾಹಿಸುವಂಥ ಚೌಹಾಣ್‌ ಹೇಳಿಕೆಯಿದ್ದ ತಿರುಚಿದ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಾಕಿದಆರೋಪದಡಿ, ದಿಗ್ವಿಜಯ ಸಿಂಗ್ ಸೇರಿದಂತೆ 11 ಜನರ ವಿರುದ್ಧ ಎರಡು ದಿನಗಳ ಹಿಂದಷ್ಟೇ ಎಫ್‌ಐಆರ್ ದಾಖಲಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ನಡೆದ ಘಟನೆಯೊಂದನ್ನು ಆಧಾರವಾಗಿಟ್ಟುಕೊಂಡುಚೌಹಾಣ್‌ ಅವರ ವಿರುದ್ಧವೇ ದಿಗ್ವಿಜಯ್‌ ಸಿಂಗ್‌ ಇದೀಗ ದೂರು ನೀಡಿದ್ದಾರೆ.

ವಿಡಿಯೊದಲ್ಲಿ ಏನಿತ್ತು: ‘ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ರ್‍ಯಾಲಿ ಸಂದರ್ಭದಲ್ಲಿ, ರಾಹುಲ್‌ ಗಾಂಧಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಗಳ ಹೆಸರಿನ ಬದಲಾಗಿ ಛತ್ತೀಸ್‌ಗಡದ ಮುಖ್ಯಮಂತ್ರಿಯವರ ಹೆಸರನ್ನು ಉಲ್ಲೇಖಿಸಿದಂಥ ತಿರುಚಿದ ವಿಡಿಯೊವನ್ನು ಚೌಹಾಣ್‌ ಟ್ವಿಟರ್‌ನಲ್ಲಿ ಹಾಕಿದ್ದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ತಿರುಚಿದ ವಿಡಿಯೊ ಹಾಕಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದೇ ಕ್ರಮವನ್ನು ಮುಖ್ಯಮಂತ್ರಿಗಳ ವಿರುದ್ಧವೂ ತೆಗೆದುಕೊಳ್ಳಬೇಕು. ಪೊಲೀಸರು ಎಫ್‌ಐಆರ್‌ ದಾಖಲಿಸದೇ ಹೋದಲ್ಲಿ ನ್ಯಾಯಾಲಯದ ಮೆಟ್ಟಿಲೇರುವ ಎಚ್ಚರಿಕೆಯನ್ನೂಸಿಂಗ್‌ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT