ಮಂಗಳವಾರ, ಏಪ್ರಿಲ್ 7, 2020
19 °C

ದೆಹಲಿ ಹಿಂಸಾಚಾರ ಖಂಡಿಸಿ ಸಂಸತ್ ಆವರಣದಲ್ಲಿ ಟಿಎಂಸಿ, ಎಎಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದಿರುವ‌ ಹಿಂಸಾಚಾರ ಪ್ರಕರಣವನ್ನು ಖಂಡಿಸಿ ತೃಣಮೂಲ‌ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ)ದ ಸದಸ್ಯರು ಸಂಸತ್ ಭವನದ ಆವರಣದಲ್ಲಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರು‌ ಸೋಮವಾರ ಪ್ರತಿಭಟನೆ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಡೆದ ಕೇಂದ್ರದ ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಕೆಲವರು ‘ಗೋಲಿ ಮಾರೊ’ ಘೋಷಣೆ ಕೂಗಿದ್ದರ ಬಗ್ಗೆ ತನಿಖೆ ನಡೆಸುವಂತೆ ಟಿಎಂಸಿ ಹಿರಿಯ ಸದಸ್ಯ ಸೌಗತ್ ರಾಯ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಈಶಾನ್ಯ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರದ ಕುರಿತು ಸಮಗ್ರ ತನಿಖೆಗೆ ಎಎಪಿ ಸದಸ್ಯರು ಕೋರಿದರು.

ಬಜೆಟ್‌ನ ಎರಡನೇ ಹಂತದ ಅಧಿವೇಶನ 11 ಗಂಟೆಗೆ  ಆರಂಭವಾಗಲಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳು ದೆಹಲಿ ಬೆಳವಣಿಗೆಯ ಕುರಿತು ಧರಣಿ ನಡೆಸಲಿವೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು