ಸೋಮವಾರ, ಆಗಸ್ಟ್ 19, 2019
28 °C

ಇಂದು ಸಿಡಬ್ಲ್ಯುಸಿ ಸಭೆ: ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷ?

Published:
Updated:

ನವದೆಹಲಿ: ಕಾಂಗ್ರೆಸ್‌ ಪಕ್ಷದ ಮಧ್ಯಂತರ ಅವಧಿಯ ಅಧ್ಯಕ್ಷ ಯಾರು ಎಂಬುದು ಶನಿವಾರ ನಿರ್ಧಾರವಾಗುವ ಸಾಧ್ಯತೆ ಇದೆ. ಲೋಕಸಭೆ ಸೋಲಿನ ಹೊಣೆ ಹೊತ್ತು ರಾಹುಲ್‌ ಗಾಂಧಿ ಅವರು ರಾಜೀನಾಮೆ ನೀಡಿದ ಬಳಿಕ ಪಕ್ಷದಲ್ಲಿ ನಾಯಕತ್ವಕ್ಕೆ ಸಂಬಂಧಿಸಿ ಗೊಂದಲ ಮೂಡಿತ್ತು. ಶನಿವಾರ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಮಧ್ಯಂತರ ಅಧ್ಯಕ್ಷರ ಆಯ್ಕೆ ಆಗಬಹುದು ಎನ್ನಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಕುಲ್‌ ವಾಸ್ನಿಕ್‌ ಹೆಸರು ಕೇಳಿ ಬರುತ್ತಿದೆ. ದೆಹಲಿಯಲ್ಲಿರುವ ಕಾಂಗ್ರೆಸ್‌ ಕೇಂದ್ರ ಕಚೇರಿಯು ಶುಕ್ರವಾರ ಚಟುವಟಿಕೆಯ ಕೇಂದ್ರವಾಗಿತ್ತು. ಎರಡು ತಿಂಗಳಲ್ಲಿ ಈ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.

Post Comments (+)