ಮಂಗಳವಾರ, ಜನವರಿ 28, 2020
17 °C

ಸಂವಿಧಾನದ ಮುನ್ನುಡಿ ಓದಿ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್‌ ನಾಯಕರ ಸತ್ಯಾಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂವಿಧಾನದಲ್ಲಿ ಪ್ರಸ್ತಾಪಿಸಿರುವಂತೆ ದೇಶದ ಪ್ರಜೆಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ನಾಯಕರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ದೆಹಲಿಯ ಮಹಾತ್ಮಾ ಗಾಂಧಿ ಸ್ಮಾರಕ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ಕುಳಿತಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಜಾರಿಗೆ ತರಲು ಹೊರಟಿರುವ  ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಸತ್ಯಾಗ್ರಹದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ಸೋನಿಯಾ ಗಾಂಧಿ ಅವರಿಗೆ ಜೊತೆಯಾಗಿದ್ದಾರೆ. 

ಸೋನಿಯಾ ಗಾಂಧಿ, ಮನಮೋಹನ್‌ ಸಿಂಗ್‌ ಮತ್ತು ರಾಹುಲ್‌ ಗಾಂಧಿ ಅವರು ಸತ್ಯಾಗ್ರಹದಲ್ಲಿ ಸಂವಿಧಾನದ ಮುನ್ನುಡಿ ಓದಿದರು. ‌

‘ಸಂವಿಧಾನದ ಶಕ್ತಿಯನ್ನು ನೆನಪಿಸಲು ಈ ಧರಣಿ ಆಯೋಜಿಸಲಾಗಿದೆ,’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ತಿಳಿಸಿದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು