ಭಾನುವಾರ, ಜನವರಿ 26, 2020
27 °C
Top Hizbul terrorist killed in encounter with security forces in J&K

ಹಿಜ್ಬುಲ್ ಉಗ್ರ ಎನ್‌ಕೌಂಟರ್‌ಗೆ ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು : ‘ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಕಾರ್ಯಾಚರಣೆಯಲ್ಲಿ ಆತನ ಸಹಚರನೊಬ್ಬ ತಪ್ಪಿಸಿಕೊಂಡಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

‘ಗೊಂಡಾನಾ ವ್ಯಾಪ್ತಿಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನಾ ಸಿಬ್ಬಂದಿ, ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹತ್ಯೆಗೀಡಾದವನ್ನು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯಲ್ಲಿ ಪ್ರಮುಖ ಸ್ಥಾನ ಹೊಂದಿದ್ದ ಹರೂನ್ ವಾನಿ ಎಂದು ಗುರುತಿಸಲಾಗಿದೆ’ ಎಂದು ಜಮ್ಮುವಿನ (ರಕ್ಷಣಾ) ಸಾರ್ವಜನಿಕ ಸಂಪರ್ಕಾಧಿಕಾರಿ ದೇವೆಂದರ್ ಆನಂದ ಮಾಹಿತಿ ನೀಡಿದ್ದಾರೆ. 

‘ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದಿತ್ತು. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಭಯೋತ್ಪಾದಕ ಹಿಮದಿಂದ ಆವೃತ್ತವಾಗಿದ್ದ ಪ್ರದೇಶದತ್ತ ಓಡಿ ಹೋಗಿ ತಪ್ಪಿಸಿಕೊಂಡ. ಆತನ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ’ ಎಂದು ಐಜಿಪಿ ಸುಜಿತ್ ಕುಮಾರ್ ತಿಳಿಸಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು