ಟ್ರ್ಯಾಕ್ಟರ್‌ ಪ್ರಯಾಣಿಕರಿಗೆ ವಿಮೆ ಸಿಗದು

7

ಟ್ರ್ಯಾಕ್ಟರ್‌ ಪ್ರಯಾಣಿಕರಿಗೆ ವಿಮೆ ಸಿಗದು

Published:
Updated:

ನವದೆಹಲಿ: ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುವಾಗ ಸಂಭವಿಸುವ ಅಪಘಾತದಲ್ಲಿ ಗಾಯಗೊಂಡವರಿಗೆ ವಿಮಾ ಕಂಪನಿ ಪರಿಹಾರ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೃಷಿ ಚಟುವಟಿಕೆಗಳಿಗೆ ಮೀಸಲಾದ ಟ್ರ್ಯಾಕ್ಟರ್‌ನಲ್ಲಿ ಚಾಲಕನನ್ನು ಬಿಟ್ಟು ಬೇರೆಯವರು ಪ್ರಯಾಣಿಸಲು ಅವಕಾಶ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿದೀಪಕ್‌ ಮಿಶ್ರಾ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

2010ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಶಿವರಾಜ್‌ ಎಂಬುವರು ತೀವ್ರವಾಗಿ ಗಾಯಗೊಂಡಿದ್ದರು.

ಗಾಯಾಳುವಿಗೆ ₹9.02 ಲಕ್ಷ ಪರಿಹಾರ ನೀಡುವಂತೆ ವಾಹನ ಅಪಘಾತ ಪ್ರಕರಣ ಇತ್ಯರ್ಥ ನ್ಯಾಯಮಂಡಳಿಯು ವಿಮಾ ಕಂಪನಿಗೆ ಆದೇಶಿಸಿತ್ತು. ಇದನ್ನು ವಿಮಾ ಕಂಪನಿ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿತ್ತು. ಇದರ ವಿರುದ್ಧ ಶಿವರಾಜ್‌, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !