ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಒಸಿ ಬಳಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಜೊತೆಗಿನ ವ್ಯಾಪಾರ ರದ್ದು

ಗೃಹ ಸಚಿವಾಲಯ ಆದೇಶ
Last Updated 18 ಏಪ್ರಿಲ್ 2019, 16:41 IST
ಅಕ್ಷರ ಗಾತ್ರ

ನವದೆಹಲಿ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಆ‌ಯ್ದ ಸ್ಥಳಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಂದಿಗೆ ನಡೆಯುತ್ತಿದ್ದ ವ್ಯಾಪಾರವನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಭಾರತ ರದ್ದುಗೊಳಿಸಿದೆ.

ನೆರ ರಾಷ್ಟ್ರಗಳು ಎಲ್‌ಒಸಿಗುಂಟ ಇರುವ ಮಾರ್ಗವನ್ನು ಪಾಕಿಸ್ತಾನ ಮೂಲದ ಸಂಘಟನೆಗಳು ಅಕ್ರಮ ಆಯುಧಗಳನ್ನು, ಮಾದಕ ವಸ್ತು ಹಾಗೂ ನಕಲಿ ನೋಟುಗಳನ್ನು ಸಾಗಿಸಲು ಬಳಸುತ್ತಿರುವ ಬಗ್ಗೆ ತನಿಖಾ ಸಂಸ್ಥೆಗಳು ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ಗುರುವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಸ್ತುತ, ಜಮ್ಮುಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸಲಾಮಾಬಾದ್‌, ಪೂಂಚ್‌ ಜಿಲ್ಲೆಯ ಚಕ್ಕನ್‌–ದ–ಬಾಗ್‌ನಲ್ಲಿ ವಾರಕ್ಕೆ ನಾಲ್ಕು ದಿನ ವ್ಯಾಪಾರ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT