ಪಶ್ಚಿಮ ಬಂಗಾಳ: ಟಿಎಂಸಿ ಶಾಸಕನಿಗೆ ಗುಂಡಿಕ್ಕಿ ಹತ್ಯೆ

7

ಪಶ್ಚಿಮ ಬಂಗಾಳ: ಟಿಎಂಸಿ ಶಾಸಕನಿಗೆ ಗುಂಡಿಕ್ಕಿ ಹತ್ಯೆ

Published:
Updated:

ಕೃಷ್ಣನಗರ (ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕ ಸತ್ಯಜಿತ್‌ ವಿಶ್ವಾಸ್‌ ಅವರನ್ನು ಅಪರಿಚಿತ ದುಷ್ಕರ್ಮಿಗಳು ಶನಿವಾರ ನಾದಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 

41 ವರ್ಷದ ಸತ್ಯಜಿತ್‌, ಕೃಷ್ಣಗಂಜ್‌ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. 

ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯ ಹನ್ಸ್‌ಕಾಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಫೂಲ್‌ಬರಿಯ ಸರಸ್ವತಿ ಪುಜಾ ಮಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರ ಜತೆಗೆ ಇದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಇಬ್ಬರು ಆಗಂತುಕರು ಗುಂಡು ಹಾರಿಸಿದ್ದಾರೆ. ಶಾಸಕರು ವೇದಿಕೆ ಮೇಲೆ ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗೆ ಅವರು ಕೊನೆ ಉಸಿರೆಳೆದಿದ್ದರು.

ಇದು ಬಿಜೆಪಿ ನಡೆಸಿದ ಯೋಜಿತ ಕೊಲೆ ಎಂದು ಆಡಳಿತರೂಢ ಪಕ್ಷ ಆರೋಪಿಸಿದರೆ, ‘ಆಡಳಿತ ಪಕ್ಷದ ಆಂತರಿಕ ಕಲಹದ ಫಲಿತಾಂಶವಿದು’ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ.

ಬರಹ ಇಷ್ಟವಾಯಿತೆ?

 • 10

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !