‘ತಿದ್ದುಪಡಿ ಮಸೂದೆ ಅಂಗೀಕಾರಕ್ಕಾಗಿ ಚಳಿಗಾಲದ ಅಧಿವೇಶನದವರೆಗೆ ಕಾಯಬೇಕು ’

7

‘ತಿದ್ದುಪಡಿ ಮಸೂದೆ ಅಂಗೀಕಾರಕ್ಕಾಗಿ ಚಳಿಗಾಲದ ಅಧಿವೇಶನದವರೆಗೆ ಕಾಯಬೇಕು ’

Published:
Updated:

ನವದೆಹಲಿ: ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದಿರುವ ತ್ರಿವಳಿ ತಲಾಖ್‌ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಶುಕ್ರವಾರ ಅಂಗೀಕರಿಸುವುದಿಲ್ಲ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯನಾಯ್ಡು ತಿಳಿಸಿದ್ದಾರೆ.

ಮುಂಗಾರು ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ಮಸೂದೆ ಅಂಗೀಕಾರಕ್ಕಾಗಿ ಚಳಿಗಾಲದ ಅಧಿವೇಶನದವರೆಗೆ ಕಾಯಬೇಕು ಎಂದರು.

ವಿರೋಧ ಪಕ್ಷಗಳು ಇರಿಸಿದ್ದ ಬೇಡಿಕೆಗಳಿಗೆ ಸಹಮತ ಸೂಚಿಸಿರುವ ಕೇಂದ್ರ ಸರ್ಕಾರ ಗುರುವಾರ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸೂಚಿಸಿತ್ತು.

ತಲಾಖ್‌ ನೀಡುವ ವ್ಯಕ್ತಿಯು ವಿಚಾರಣೆ ಆರಂಭವಾಗುವ ವರೆಗೆ ಜಾಮೀನು ಪಡೆಯಬಹುದಾದ ಅವಕಾಶವನ್ನು ನೀಡಬೇಕು. ಸಂತ್ರಸ್ತೆಯ ಹತ್ತಿರದ ಸಂಬಂಧಿಕರು ಆಕೆಯ ಪರವಾಗಿ ದೂರು ನೀಡಲು ಅವಕಾಶ ಇರಬೇಕು ಮತ್ತು ಕೌಟುಂಬಿಕ ಸಮಸ್ಯೆ ಬಗೆಹರಿಸಿಕೊಳ್ಳಲು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮಧ್ಯಸ್ಥಿಕೆ ವಹಿಸಲು ಅವಕಾಶ ನೀಡಿ ಮಸೂದೆಗೆ ತಿದ್ದುಪಡಿ ತರಬೇಕು ಎಂಬುದು ವಿರೋಧ ಪಕ್ಷಗಳ ಒತ್ತಾಯವಾಗಿತ್ತು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮುಸ್ಲಿಂ ಮಹಿಳೆಯರ (ಮದುವೆ ಹಕ್ಕುಗಳ ರಕ್ಷಣೆ) ಮಸೂದೆ/ತ್ರಿವಳಿ ತಲಾಖ್‌ ನಿಷೇಧ ಮಸೂದೆ ಕುರಿತು ಇತ್ತೀಚೆಗಷ್ಟೇ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಆತಂಕ ಮತ್ತು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದವು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !