ಭಾನುವಾರ, ಡಿಸೆಂಬರ್ 15, 2019
24 °C

ತ್ರಿಪುರ: ಕಮರಿಗೆ ಉರುಳಿದ ಖಾಸಗಿ ಬಸ್‌, 30 ಪ್ರಯಾಣಿಕರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಗರ್ತಲಾ: 30 ಪ್ರಯಾಣಿಕರಿದ್ದ ಬಸ್‌ ಕಮರಿಗೆ ಉರುಳಿರುವ ದುರಂತ ಧಲೈ ಜಿಲ್ಲೆಯ ಗಂಡಾಚಾರ್‌ - ಅಮರ್‌ಪುರ ರಸ್ತೆಯ ಬಳಿ ಸಂಭವಿಸಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರೆಲ್ಲರೂ ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ರಕ್ಷಿಸಿರುವ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿರಿಯ ನಾಯಕರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿಪ್ಲವ್‌ ಕುಮಾರ್‌ ದೇವ್‌ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ, ಚಿಕಿತ್ಸೆ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಅಭಯ ನೀಡಿದ್ದಾರೆ.

‘ಎಲ್ಲರೂ ಬೇಗನೆ ಗುಣಮುಖರಾಗಲು ಪ್ರಾರ್ಥಿಸುತ್ತೇನೆ. ಘಟನೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಿದ್ದೇವೆ. ಸಂಪೂರ್ಣ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ತಿಳಿಸಿದರು.

ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿರುವ 30 ಗಾಯಾಳುಗಳಲ್ಲಿ 22 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು