ತ್ರಿಪುರಾ: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ದೇಶದ್ರೋಹ ಪ್ರಕರಣ

7

ತ್ರಿಪುರಾ: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟಿಸಿದವರ ಮೇಲೆ ದೇಶದ್ರೋಹ ಪ್ರಕರಣ

Published:
Updated:

ಅಗರ್ತಲ: ಭಾರತೀಯ ಪೌರತ್ವ (ತಿದ್ದುಪಡಿ) ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ತ್ರಿಪುರಾ ಪೊಲೀಸರು ಈಚೆಗೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ಪ್ರತಿಭಟನಾಕಾರರು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ, ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿದವರು ಆರೋಪವನ್ನು ನಿರಾಕರಿಸಿದ್ದಾರೆ.

ಬುಡಕಟ್ಟು ಸಂಘಟನೆಗಳು ಜನವರಿ 30ರಂದು ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಹಲವು ರಾಜಕೀಯ ನಾಯಕರೂ ಭಾಗವಹಿಸಿದ್ದರು. ಅಂದಿನ ರ್‍ಯಾಲಿ ಶಾಂತಿಯುತವಾಗಿ ನಡೆದಿತ್ತು ಎಂದು ಸಂಘಟಕರು ತಿಳಿಸಿದ್ದಾರೆ.

ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಭಾರತೀಯ ಪೌರತ್ವ (ತಿದ್ದುಪಡಿ)ಮಸೂದೆಗೆ ಜನವರಿ 8ರಂದು ಲೋಕಸಭೆಯಲ್ಲಿ ಅನುಮೋದನೆ ದೊರೆತಿದೆ.

ಇದನ್ನೂ ಓದಿ: ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಮಸೂದೆಗೆ ಸಂಪುಟ ಅನುಮೋದನೆ

ಇದರ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲೂ ಪ್ರತಿಭಟನೆ ತೀವ್ರಗೊಂಡಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !