ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ಪುತ್ರಿ ಹಿನ್ನಡೆ

ಬುಧವಾರ, ಜೂನ್ 19, 2019
22 °C

ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ಪುತ್ರಿ ಹಿನ್ನಡೆ

Published:
Updated:

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್ ) 8 ಲೋಕಸಭಾ ಕ್ಷೇತ್ರಗಳಲ್ಲಿ ಮುಂದಿದೆ. ಒಟ್ಟು 17 ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ಅವರ ಪುತ್ರಿ ಹಾಲಿ ಸಂಸದೆ ಕೆ.ಕವಿತಾ 37 ಸಾವಿರ ಮತಗಳಿಂದ ಹಿಂದಿದ್ದಾರೆ.
ಕವಿತಾ ಅವರು ಸ್ಪರ್ಧಿಸಿರುವ ನಿಜಾಮಾಬಾದ್ ಕ್ಷೇತ್ರದಲ್ಲಿ ಇವರ ಪ್ರತಿಸ್ಪರ್ಧಿ ಬಿಜೆಪಿಯ ಅರವಿಂದ ಧರ್ಮಪುರಿ 37 ಸಾವಿರ ಮತಗಳಿಂದ ಮುಂದಿದ್ದಾರೆ. ತೆಲಂಗಾಣದ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಸಿಕಂದರಾಬಾದ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, 36 ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ.

ಬಿಜೆಪಿಯ ಅಭ್ಯರ್ಥಿಗಳು ತೆಲಂಗಾಣದ ಕರೀಂನಗರ, ಅದಿಲಾಬಾದ್ ಲೋಕಸಭಾ ಕ್ಷೇತ್ರಗಳಲ್ಲಿ 20 ಸಾವಿರ ಮತಗಳ ಅಂತರದಿಂದ ಮುಂದಿದ್ದಾರೆ. ಕಾಂಗ್ರೆಸ್ ಪಕ್ಷದ ತೆಲಂಗಾಣ ರಾಜ್ಯಾಧ್ಯಕ್ಷ ಉತ್ತಮ್ ಕುಮಾರ್ ರೆಡ್ಡಿ ನಲಮಾಡ ಅವರು ನಲಗೊಂಡ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇತರೆ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಟಿಆರ್‌‌ಎಸ್ 11 ಕ್ಷೇತ್ರಗಳನ್ನು ತನ್ನಗಾಸಿಕೊಂಡಿತ್ತು. ಕಾಂಗ್ರೆಸ್ 2, ಬಿಜೆಪಿ, ವೈಎಸ್ ಆರ್ , ಟಿಡಿಪಿ , ಅಸಾದುದ್ದೀನ್ ಓವೈಸಿ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !