ನಾಲ್ಕನೇ ಮಹಡಿಯಿಂದ ಬಿದ್ದು ಟಿವಿ ನಿರೂಪಕಿ ಸಾವು

7

ನಾಲ್ಕನೇ ಮಹಡಿಯಿಂದ ಬಿದ್ದು ಟಿವಿ ನಿರೂಪಕಿ ಸಾವು

Published:
Updated:
Deccan Herald

ನೊಯಿಡಾ: ಖಾಸಗಿ ಸುದ್ದಿವಾಹಿನಿಯ ನಿರೂಪಕಿಯೊಬ್ಬರು ಶುಕ್ರವಾರ ಬೆಳಿಗ್ಗೆ ತಾವು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. 

‘ರಾಜಸ್ಥಾನದ ರಾಧಿಕಾ ಕೌಶಿಕ್‌ ಅವರು ಮೃತರು. ಸೆಕ್ಟರ್‌ 77ರ ಅಂತ್ರಿಕ್‌ ಫಾರೆಸ್ಟ್‌ ಅಪಾರ್ಟ್‌ಮೆಂಟ್‌ನಲ್ಲಿ ಸಹೋದ್ಯೋಗಿ ಜೊತೆ ನೆಲೆಸಿದ್ದರು. ಬೆಳಿಗ್ಗೆ 3.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ’ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

‘ಕೌಶಿಕ್‌ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಐಪಿಸಿ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆಕೆಯ ಸಹೋದ್ಯೋಗಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಸೆಕ್ಟರ್‌ 49 ಠಾಣೆಯ ಠಾಣಾಧಿಕಾರಿ ಗಿರಿಜಾಶಂಕರ್‌ ತ್ರಿಪಾಠಿ ತಿಳಿಸಿದ್ದಾರೆ.

‘ಜೀ ರಾಜಸ್ಥಾನ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಿಕ್‌ ಮತ್ತು ಸಹೋದ್ಯೋಗಿಯು ಘಟನೆ ನಡೆದ ವೇಳೆ ಕುಡಿದ ಮತ್ತಿನಲ್ಲಿದ್ದರು. ಗುರುವಾರ ರಾತ್ರಿ ಮನೆಯಲ್ಲಿ ಪಾರ್ಟಿ ನಡೆದಿದ್ದು, ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಲ್ಕನಿಯೂ ಕಡಿಮೆ ಎತ್ತರವಿದ್ದ ಕಾರಣ, ಆಯತಪ್ಪಿ ಬಿದ್ದಿರುವ ಸಾಧ್ಯತೆಯಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದ್ದು, ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !