ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ

ಭಾನುವಾರ, ಜೂನ್ 16, 2019
28 °C

ಉಗ್ರರ ದಾಳಿ: ಮೂವರು ಯೋಧರು ಹುತಾತ್ಮ

Published:
Updated:
Prajavani

ಗುವಾಹಟಿ: ಉತ್ತರ ನಾಗಾಲ್ಯಾಂಡ್‌ನಲ್ಲಿ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್‌ ಸಿಬ್ಬಂದಿ ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. 

ಅರುಣಾಚಲ ಪ್ರದೇಶ ಮತ್ತು ಮ್ಯಾನ್ಮಾರ್ ಪ್ರದೇಶದ ಟೋಬು ಮತ್ತು ಉಖಾ ಜಿಲ್ಲೆಗಳ ನಡುವೆ  ಈ ದಾಳಿ ನಡೆದಿದೆ. 

ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಯೋಧರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರ ಸ್ಥಿತಿ ಚಿಂತಾಜನಕವಾಗಿದೆ. 

ನ್ಯಾಷನಲ್ ಪೀಪಲ್ಸ್‌ ಪಾರ್ಟಿ (ಎನ್‌ಪಿಪಿ) ಶಾಸಕ ತಿರೊಂಗ ಅಬೊ ಸೇರಿದಂತೆ ಹತ್ತು ಮಂದಿಯನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ, ಉಗ್ರರನ್ನು ಸೆರೆ ಹಿಡಿಯಲು ಭದ್ರತಾ ಪಡೆ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದೆ.

ಉಗ್ರರ ಶೋಧಕ್ಕಾಗಿ ಯೋಧರು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. 

ಎರಡು ದಿನಗಳ ಹಿಂದೆ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌, ಅಸ್ಸಾಂ ಮತ್ತು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿ, ಕಾರ್ಯಾಚರಣೆಗೆ ಸೂಚನೆ ನೀಡಿದ್ದರು. ಸೇನಾ ಮುಖ್ಯಸ್ಥರ ಭೇಟಿಯ ಬೆನ್ನಲ್ಲೇ ಈ ದಾಳಿ ನಡೆದಿದೆ. 

ದಾಳಿಯ ಹೊಣೆಯನ್ನು ಯಾವ ಉಗ್ರ ಸಂಘಟನೆಯೂ ಹೊತ್ತಿಲ್ಲ. ದಾಳಿಗೆ ಎನ್‌ಎಸ್‌ಸಿಎನ್‌(ಐಎಂ) ಸಂಘಟನೆಯೇ ಕಾರಣವೆಂದು ಶಂಕಿಸಲಾಗಿದೆ. 

 

 

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 4

  Sad
 • 0

  Frustrated
 • 1

  Angry

Comments:

0 comments

Write the first review for this !