ಶನಿವಾರ, ಫೆಬ್ರವರಿ 29, 2020
19 °C

ಕರ್ನಾಟಕದ ಇಬ್ಬರು ಮಕ್ಕಳಿಗೆ ರಾಷ್ಟ್ರೀಯ ಶೌರ್ಯ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಸಕ್ತಸಾಲಿನ ರಾಷ್ಟ್ರೀಯ ಶೌರ್ಯ ಪುರಸ್ಕಾರ ಪ್ರಕಟವಾಗಿದ್ದು, ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ಘೋಷಣೆಯಾಗಿದೆ.

ಕಳೆದ ಆಗಸ್ಟ್‌ನಲ್ಲಿ ರಾಜ್ಯದಲ್ಲಿ ತಲೆದೋರಿದ್ದ ಪ್ರವಾಹ ಪರಿಸ್ಥಿತಿಯಲ್ಲಿ ಆಂಬುಲೆನ್ಸ್‌ಗೆ ದಾರಿ ಬಿಡಿಸಿ, ಐವರನ್ನು ರಕ್ಷಿಸಿದ್ದ ಬಾಲಕ ವೆಂಕಟೇಶ್ ಮತ್ತು ಕೋಪೋದ್ರಿಕ್ತ ಹಸುವಿನ ದಾಳಿಯಿಂದ ಮನೆಯ ಬಳಿ ನಿಂತಿದ್ದ ಎರಡು ವರ್ಷದ ತಮ್ಮನನ್ನು ರಕ್ಷಿಸಿದ್ದ ಆರತಿ ಪುರಸ್ಕಾರಕ್ಕೆ ಆಯ್ಕೆಯಾದವರು.

ಭಾರತೀಯ ಮಕ್ಕಳ ಕಲ್ಯಾಣ ಮಂಡಳಿಯು ಮಕ್ಕಳ ಸಾಹಸ ಕಾರ್ಯ ಗುರುತಿಸಿ ಶೌರ್ಯ ಪ್ರಶಸ್ತಿ ಘೋಷಿಸಿದೆ. ವೆಂಕಟೇಶ, ದೇವದುರ್ಗ ತಾಲ್ಲೂಕಿನ ಸಂಕನೂರು ಗ್ರಾಮದವರು ಮತ್ತು ಆರತಿ, ಹೊನ್ನಾವರ ತಾಲ್ಲೂಕಿನ ನವಿಲಗೋಣ ಗ್ರಾಮದವರು.

ಕರ್ನಾಟಕದ ಇಬ್ಬರೂ ಸೇರಿದಂತೆ ದೇಶದ ಒಟ್ಟು 22 ಮಕ್ಕಳಿಗೆ ಪ್ರಶಸ್ತಿ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆ ಇದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ‌ ಮುಖ್ಯಸ್ಥೆ ಗೀತಾ ಸಿದ್ಧಾರ್ಥ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು