ಶುಕ್ರವಾರ, ಜೂಲೈ 3, 2020
21 °C

ಜಮ್ಮು–ಕಾಶ್ಮೀರ: ಉಗ್ರ ದಾಳಿಗೆ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು–ಕಾಶ್ಮೀರದ ಬಾರಾಮುಲ್ಲಾದ ಸೋಪೋರ್‌ನಲ್ಲಿ ಸಿಆರ್‌ಪಿಎಫ್‌ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇಬ್ಬರು ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಸೋಪೋರ್ ಪಟ್ಟಣದ ಚೆಕ್‌ಪೋಸ್ಟ್‌ನಲ್ಲಿ ದಾಳಿ ನಡೆದಿದೆ. ಅವಿತಿರುವ ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕಾಶ್ಮೀರ ಕಣಿವೆಯಲ್ಲಿ ಅರೆಸೇನಾ ಪಡೆ ಸಿಬ್ಬಂದಿ ಮೇಲೆ ಈ ವಾರ ನಡೆಯುತ್ತಿರುವ ಮೂರನೇ ಉಗ್ರ ದಾಳಿ ಇದಾಗಿದೆ. ಪುಲ್ವಾಮಾದ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧರೊಬ್ಬರು ಗಾಯಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು