ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಗುರುವಾರ , ಜೂಲೈ 18, 2019
29 °C

ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

Published:
Updated:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಉಗ್ರರು ಮತ್ತು ಭದ್ರತಾಪಡೆಗಳ ನಡುವಣ ಗುಂಡಿನ ಚಕಮಕಿ ಮಂಗಳವಾರ ಬೆಳಿಗ್ಗೆಯೂ ಮುಂದುವರಿದಿದೆ.

ಇಬ್ಬರು ಉಗ್ರರನ್ನು ಬೆಳಿಗ್ಗೆ ಹತ್ಯೆ ಮಾಡಲಾಗಿದ್ದು, ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿ ಮುಂದುವರಿದಿದೆ.

ಪುಲ್ವಾಮಾ ಜಿಲ್ಲೆಯ ಅರಿಹಲ್-ಲಸ್ಸಿಪೊರಾ ರಸ್ತೆಯಲ್ಲಿ ಸೇನಾಪಡೆಯ ಬೆಂಗಾವಲು ವಾಹನವನ್ನು ಗುರಿಯಾಗಿಸಿ ಸೋಮವಾರ ಉಗ್ರರು ಕಚ್ಚಾ ಸ್ಫೋಟಕ ಬಳಸಿ ದಾಳಿ ನಡೆಸಿದ್ದು, ಒಂಬತ್ತು ಯೋಧರು ಗಾಯಗೊಂಡಿದ್ದರು.

ಇದನ್ನೂ ಓದಿ: ಪುಲ್ವಾಮಾ ದಾಳಿ ಸ್ಥಳದಿಂದ 27ಕಿಮೀ ದೂರದಲ್ಲಿ ಸೇನೆಯ ಬೆಂಗಾವಲು ವಾಹನದ ಮೇಲೆ ದಾಳಿ​

ನಂತರ ಅನಂತನಾಗ್‌ ಜಿಲ್ಲೆಯ ಅಚಬಲ್‌ ಪ್ರದೇಶದ ಬಿದೂರ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ವಿಶೇಷ ಕಾರ್ಯಪಡೆ ಮತ್ತು ರಾಷ್ಟ್ರೀಯ ರೈಫಲ್ಸ್ ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಮೇಜರ್‌ ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಹತರಾಗಿದ್ದರು. ಘಟನಾ ಸ್ಥಳ ಜಿಲ್ಲಾ ಕೇಂದ್ರದಿಂದ 65 ಕಿ.ಮೀ ದೂರದಲ್ಲಿತ್ತು. ಗುಂಡಿನ ಚಕಮಕಿ ಮಂಗಳವಾರ ಬೆಳಿಗ್ಗೆಯೂ ಮುಂದುವರಿದಿದೆ.

ಇದನ್ನೂ ಓದಿ: ಪುಲ್ವಾಮದಲ್ಲಿ ಮತ್ತೊಂದು ದಾಳಿಗೆ ಉಗ್ರರ ಸಂಚು: ಜಮ್ಮು ಕಾಶ್ಮೀರದಲ್ಲಿ ಕಟ್ಟೆಚ್ಚರ 

ಪ್ರತಿಭಟನೆ: ಸೋಮವಾರ ಗುಂಡಿನ ಚಕಮಕಿ ಅಂತ್ಯಗೊಂಡ ನಂತರ ಭದ್ರತಾಪಡೆಗಳ ವಿರುದ್ಧ ನಾಗರಿಕರು ಕಲ್ಲುತೂರಾಟ ನಡೆಸಿದ್ದಾರೆ. ಅಶ್ರುವಾಯು ಮತ್ತು ಪೆಲೆಟ್‌ ಬಂದೂಕಿನ ದಾಳಿ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !