ಮಂಗಳವಾರ, ನವೆಂಬರ್ 19, 2019
29 °C

ಛತ್ತೀಸಗಡ: ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ

Published:
Updated:

ರಾಯಪುರ: ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಕಿರಂಡುಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಟ್ರೆಮ್‌ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್‌ ಸಂಘಟನೆಯ ಮಲಂಗಿರ್‌ ಪ್ರದೇಶ ಸಮಿತಿ ಸದಸ್ಯರಾದ ಲಾಚು ಮಾಂಡವಿ ಮತ್ತು ಪೊಡಿಯಾ ಎಂಬುವವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಇಬ್ಬರು ನಕ್ಸಲರ ತಲೆಗೆ ತಲಾ ₹ 5ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದಿದ್ದಾರೆ.

ಸ್ಥಳೀಯ ಮತ್ತು ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಪೊಲೀಸರು ಜಂಟಿಯಾಗಿ ಶೋಧ ಕಾರ್ಯ ನಡೆಸುತ್ತಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಪಿಸ್ತೂಲು, ರೈಫಲ್‌ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)