ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ, ತೆಲಂಗಾಣದಲ್ಲಿ ಮೊದಲ ಕೊರೊನಾ ವೈರಸ್‌ ಸೋಂಕು ಪ್ರಕರಣ ಪತ್ತೆ

Last Updated 2 ಮಾರ್ಚ್ 2020, 10:48 IST
ಅಕ್ಷರ ಗಾತ್ರ

ನವದೆಹಲಿ: ಚೀನಾದಾದ್ಯಂತ ಭೀತಿ ಸೃಷ್ಟಿಸಿ ಸಾವಿರಾರು ಜನರನ್ನು ಬಲಿಪಡೆದುಕೊಂಡಿರುವ ಕೊರೊನಾ ವೈರಸ್ ಸೋಂಕು ಇದೀಗ ಭಾರತಕ್ಕೂ ವ್ಯಾಪಿಸುವ ಆತಂಕ ಎದುರಾಗಿದೆ. ಹೊಸದಾಗಿ ದೆಹಲಿ ಮತ್ತು ತೆಲಂಗಾಣದಲ್ಲಿ ವೈರಸ್ ಸೋಂಕು ದೃಢಪಟ್ಟಿದೆ.

ಮೊದಲ ಬಾರಿಗೆ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಕೇರಳದ ಮೂರು ಪ್ರಕರಣ ಸೇರಿದಂತೆ ಭಾರತದಲ್ಲಿ ಒಟ್ಟು ಐದು ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಇಬ್ಬರು ರೋಗಿಗಳು ಸ್ಥಿರವಾಗಿದ್ದು, ಸೂಕ್ಷ್ಮವಾಗಿ ನಿಗಾ ಇಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ದೆಹಲಿ ಮೂಲದ ವ್ಯಕ್ತಿಯು ಇಟಲಿಯಲ್ಲಿ ಪ್ರವಾಸ ಕೈಗೊಂಡಿದ್ದರೆ, ತೆಲಂಗಾಣದ ವ್ಯಕ್ತಿಯು ದುಬೈನಲ್ಲಿ ಪ್ರಯಾಣ ಕೈಗೊಂಡಿದ್ದರು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಸೋಮವಾರ ಚೀನಾದಲ್ಲಿ ಹೊಸದಾಗಿ ಡಜನ್‌ಗೂ ಅಧಿಕ ಜನರು ಮೃತಪಟ್ಟ ನಂತರ ಜಾಗತಿಕವಾಗಿ ಇದುವರೆಗೂ ಕೊರೊನಾ ವೈರಸ್ ಸೋಂಕಿಗೆ 3,000 ಮಂದಿಯು ಬಲಿಯಾಗಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ವೈರಸ್ ಸೋಂಕು ಕಾಣಿಸಿಕೊಂಡು ಇದುವರೆಗೂ ಸುಮಾರು 60 ರಾಷ್ಟ್ರಗಳಿಗೆ ಹಬ್ಬಿದೆ ಮತ್ತು 88 ಸಾವಿರಕ್ಕೂ ಅಧಿಕ ಜನರು ಸೋಂಕಿಗೆ ಒಳಗಾಗಿದ್ದಾರೆ.

ಇದಕ್ಕೂ ಮುನ್ನ ಕೇರಳದ ಮೂವರು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅವರು ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಕೊರೊನಾ ವೈರಸ್ ಭೀತಿಯಿಂದ ಈಗಾಗಲೇ ಜಾಗತಿಕವಾಗಿ ಹಣಕಾಸು ಮಾರುಕಟ್ಟೆಗಳು ಕುಸಿಯುತ್ತಿವೆ. ಅನೇಕ ನಗರಗಳಲ್ಲಿ ಖಾಲಿ ಬೀದಿಗಳು ಕಾಣಸಿಗುತ್ತಿವೆ.

ಅಮೆರಿಕದಲ್ಲಿ ಕೊರೊನಾ ಸೋಂಕು ಎರಡನೇ ಬಲಿ ಪಡೆದಿದ್ದು, ಈ ಘಟನೆ ಬೆನ್ನಲ್ಲೇ ಇರಾನ್‌ನಿಂದ ಅಮೆರಿಕಕ್ಕೆ ಜನರು ಆಗಮಿಸುವುದನ್ನು ನಿರ್ಬಂಧಿಸಲಾಗಿದೆ. ಜೊತೆಗೆ ದಕ್ಷಿಣ ಕೊರಿಯಾ ಹಾಗೂ ಇಟಲಿಯ ಕೆಲ ಪ್ರದೇಶಗಳಿಗೆ ಪ್ರಯಾಣಿಸದಂತೆ ತನ್ನ ಜನರಿಗೆ ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT