ಪುಣೆ (ಮಹಾರಾಷ್ಟ್ರ): ಇಲ್ಲಿನ ಆಸ್ಪತ್ರೆಯೊಂದರಲ್ಲಿಚಿಕಿತ್ಸೆ ಪಡೆಯುತ್ತಿದ್ದ 52 ವರ್ಷದ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಇದು ಭಾನುವಾರ ವರದಿಯಾದಎರಡನೆ ಘಟನೆಯಾಗಿದೆ. ಇದರಿಂದಾಗಿ ಭಾನುವಾರ ಬೆಳಗ್ಗೆಯೇ ಇಬ್ಬರು ವ್ಯಕ್ತಿಗಳು ಕೊರೊನಾಗೆ ಬಲಿಯಾದಂತಾಗಿದೆ.

ಇದಕ್ಕೂ ಮುನ್ನ ಭಾನುವಾರ ಬೆಳಗಿನ ಜಾವಕೊರೊನಾ ಪೀಡಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.

ಕಳೆದ 10ದಿನಗಳ ಅವಧಿಯಲ್ಲಿ ಪುಣೆ ಜಿಲ್ಲೆಯಲ್ಲಿಯೇ ಕೊರೊನಾಗೆ ಬಲಿಯಾದವರಸಂಖ್ಯೆ ನಾಲ್ಕಕ್ಕೆ ಏರಿದೆ.ಪುಣೆಯಲ್ಲಿ ಭಾನುವಾರ ಮೃತಪಟ್ಟ 52 ವರ್ಷ ವಯಸ್ಸಿನವ್ಯಕ್ತಿ ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಇದಲ್ಲದೆ, ರಾಜ್ಯದಾದ್ಯಂತ ಭಾನುವಾರ ಬೆಳಗ್ಗೆ26 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 661ಕ್ಕೆ ಏರಿಕೆಯಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.