ಮಂಗಳವಾರ, ಮೇ 18, 2021
30 °C

ಪ್ರತಿಭಟನಾ ನಿರತ ಇಬ್ಬರು ವಕೀಲರಿಂದ ಆತ್ಮಹತ್ಯೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಾಯವ್ಯ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಪ್ರತಿಭಟನಾನಿರತ ಇಬ್ಬರು ವಕೀಲರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 

ವಕೀಲರು ಮತ್ತು ಪೊಲೀಸರ ನಡುವಿನ ಹಗ್ಗಜಗ್ಗಾಟ ತಾರಕಕ್ಕೇರಿದ್ದು, ವಕೀಲರು ನಡೆಸುತ್ತಿರುವ ಪ್ರತಿಭಟನೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ.

 ವಕೀಲನೊಬ್ಬ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇತರರು ಒಂದು ತಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿವಿ ಚಾನಲ್‌ವೊಂದು ವರದಿ ಮಾಡಿರುವಂತೆ ಮತ್ತೋರ್ವ ವಕೀಲ ರೋಹಿಣಿ ನ್ಯಾಯಾಲಯ ಸಂಕೀರ್ಣ ಕಟ್ಟಡವನ್ನೇರಿ ಕೆಳಗೆ ಬೀಳುವುದಾಗಿ ಬೆದರಿಕೆಯೊಡ್ಡಿದ್ದ, ನ್ಯಾಯಾಧೀಶರೊಂದಿಗೆ ಮಾತನಾಡಿದ ಬಳಿಕ ಆತ ಕೆಳಗೆ ಇಳಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆಯ ಬಳಿಕ ಕೆಲಸ ಕಾರ್ಯಗಳನ್ನು ಬದಿಗೊತ್ತಿರುವ ವಕೀಲರು ಪ್ರತಿಭಟನೆ ಕೈಗೊಂಡಿದ್ದಾರೆ.

ನಮ್ಮವರ ಮೇಲೆ ಯಾವ ಪೊಲೀಸ್ ಅಧಿಕಾರಿಗಳು ಫೈರಿಂಗ್ ಮತ್ತು ಲಾಟಿಚಾರ್ಜ್ ಮಾಡಿದರೋ ಅವರ ವಿರುದ್ಧದ ಹೋರಾಟ ನಮ್ಮದು. ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಪ್ರತಿಭಟನಾ ನಿರತ ವಕೀಲರು ಹೇಳುತ್ತಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು