ಗುಂಡಿನ ಚಕಮಕಿ: ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ ಮಾಡಿದ ಸೇನಾ ಯೋಧರು

7

ಗುಂಡಿನ ಚಕಮಕಿ: ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ ಮಾಡಿದ ಸೇನಾ ಯೋಧರು

Published:
Updated:

ಜಮ್ಮು: ಶ್ರೀನಗರ ಮತ್ತು ಜಮ್ಮು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ನಾಗರಿಕರು ಸೇರಿದಂತೆ ಯೊಧರು ಗಾಯಗೊಂಡಿದ್ದಾರೆ. ಪ್ರತಿ ದಾಳಿ ನಡೆಸಿದ ಭಾರತೀಯ ಯೋಧರ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಗುರುವಾರ ಮಧ್ಯಾಹ್ನ ಇಲ್ಲಿನ ಚೆಕ್‌ಪೋಸ್ಟ್‌ ಸಮೀಪ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮೂವರು ನಾಗರೀಕರು ಸೇರಿದಂತೆ 8 ಜನ ಸೇನಾ ಯೋಧರು ಗಾಯಗೊಂಡಿದ್ದಾರೆ. ದಾಳಿಯ ಬಳಿಕ ಉಗ್ರರು ಸಮೀಪದ ಅರಣ್ಯ ಪ್ರದೇಶ ಹೊಕ್ಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಗ್ರರು ಎಷ್ಟು ಜನ ಇದ್ದರು ಎಂಬ ಮಾಹಿತಿ ನಿಖರವಾಗಿ ತಿಳಿದುಬಂದಿಲ್ಲ, ಭಯೋತ್ಪಾದಕರ ಪತ್ತೆಗಾಗಿ ಯೋಧರು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಚೆಕ್‌ಪೋಸ್ಟ್ ಅರಣ್ಯಕ್ಕೆ ಹೊಂದಿಕೊಂಡಿದ್ದ ಗ್ರಾಮಗಳ ಜನರನ್ನು ಬೇರೆ ಕಡೆ ಸ್ಥಳಾಂತರ ಮಾಡಿ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ. 

ಹತ್ಯೆ ಮಾಡಿದ ಉಗ್ರರು ಎಲ್‌ಇಟಿ ಸಂಘಟನೆಗೆ ಸೇರಿದವರು ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 16

  Happy
 • 3

  Amused
 • 0

  Sad
 • 2

  Frustrated
 • 0

  Angry

Comments:

0 comments

Write the first review for this !