ಶನಿವಾರ, ಜೂಲೈ 4, 2020
24 °C

ಜಮ್ಮು-ಕಾಶ್ಮೀರ: ಗಡಿಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಜಮ್ಮು-ಕಾಶ್ಮೀರ: ಇಲ್ಲಿನ ದಕ್ಷಿಣ ಕಾಶ್ಮೀರದ ಸೊಫಿಯಾನ್ ಜಿಲ್ಲೆ ಸಮೀಪ ಗಡಿಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಬುಧವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಆರಂಭಗೊಂಡಿರುವ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ಹಲವರು ಅಡಗಿದ್ದು, ಅಡಗುತಾಣಗಳನ್ನು ಗಡಿಭದ್ರತಾ ಪಡೆಗಳು ಸುತ್ತುವರಿದಿವೆ.

ಮಂಗಳವಾರ ರಾತ್ರಿ ಇಲ್ಲಿನ ಮಲ್ಹುರಾ ಜನ್ ಪೋರಾ ಗ್ರಾಮಗಳಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡವು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸೆರೆಸಿಕ್ಕಿದ್ದು, ಇಬ್ಬರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು