ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಕುಲ್ಗಾಂನಲ್ಲಿ ಇಬ್ಬರು ಉಗ್ರರ ಹತ್ಯೆ

Last Updated 13 ಜೂನ್ 2020, 2:02 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಿಪೊರಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಭಯೋತ್ಪಾದಕರು ಭದ್ರಾ ಸಿಬ್ಬಂದಿಯತ್ತ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಈ ವರ್ಷ ಜನವರಿಯಿಂದ ಜೂನ್ 10ರವರೆಗೆ ಜಮ್ಮು-ಕಾಶ್ಮೀರದಲ್ಲಿ ಸುಮಾರು 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಇದರಲ್ಲಿ ಲಷ್ಕರ್-ಎ-ತೊಯ್ಬಾ, ಜೈಷ್-ಎ-ಮೊಹಮ್ಮದ್, ಹಿಜ್ಬುಲ್ ಮುಜಾಹಿದೀನ್ ಸೇರಿದಂತೆ ಹಲವು ಸಂಘಟನೆಗಳ ಉಗ್ರರು ಸೇರಿದ್ದಾರೆ ಎಂದು ಇತ್ತೀಚೆಗಷ್ಟೇ ಸೇನಾ ಮೂಲಗಳು ತಿಳಿಸಿದ್ದವು. ಕೊರೊನಾ ವೈರಸ್ ಲಾಕ್‌ಡೌನ್ ಅವಧಿಯಲ್ಲಿ, ಏಪ್ರಿಲ್ 1ರಿಂದ ಜೂನ್ 10ರ ನಡುವಣ ಅವಧಿಯಲ್ಲಿ 68 ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ ಪಾಕಿಸ್ತಾನ ಮೂಲದ ಕೆಲವು ಭಯೋತ್ಪಾದಕರೂ ಸೇರಿದ್ದಾರೆ ಎಂದೂ ಮೂಲಗಳು ಹೇಳಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT