ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರು ಹತ್ಯೆ

Last Updated 25 ಏಪ್ರಿಲ್ 2019, 5:24 IST
ಅಕ್ಷರ ಗಾತ್ರ

ಅನಂತನಾಗ್(ಜಮ್ಮು ಕಾಶ್ಮೀರ): ದಕ್ಷಿಣ ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಬಿಜ್ಬೆಹಾರ ಎಂಬಲ್ಲಿ ರಕ್ಷಣಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಗುರುವಾರ ಇಬ್ಬರು ಉಗ್ರರು ಹತರಾಗಿದ್ದಾರೆ.

ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಆಧರಿಸಿ ಈ ಪ್ರದೇಶದಲ್ಲಿ ಪೊಲೀಸರು ಹಾಗೂ ರಕ್ಷಣಾ ಪಡೆಗಳು ಜಂಟಿಯಾಗಿ ಹುಡುಕು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಉಗ್ರರು ರಕ್ಷಣಾ ಪಡೆಗಳತ್ತ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಸೇನೆಯು ಎನ್‌ಕೌಂಟರ್‌ ನಡೆಸಿದೆ.

ಈ ವೇಳೆ ಇಬ್ಬರು ಉಗ್ರರು ಬಲಿಯಾಗಿದ್ದು, ಶವಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು, ಹುಡುಕು ಕಾರ್ಯಾಚರಣೆ ಮುಂದುವರಿಸಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT