ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವಣ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರ ವಲಯದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ವಾರ ಶೋಪಿಯಾನ್ ಜಿಲ್ಲೆಯಲ್ಲಿ ನಡೆಯುತ್ತಿರುವ ಮೂರನೇ ಎನ್ಕೌಂಟರ್ ಇದಾಗಿದೆ. ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಭಾನುವಾರ ನಡೆದಿದ್ದ ಎನ್ಕೌಂಟರ್ನಲ್ಲಿ ಐವರು ಹಿಜ್ಬುಲ್ ಮುಜಾಹಿದೀನ್ ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಬಳಿಕ ಸೋಮವಾರ ಬೆಳಿಗ್ಗೆ ನಡೆದಿದ್ದ ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು.

ಇದನ್ನೂ ಓದಿ:ಪಾಕಿಸ್ತಾನ ಸೇನೆಯಿಂದ ಪೂಂಛ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ

ಪಾಕ್ ಸೇನೆಯಿಂದಲೂ ಗುಂಡಿನ ದಾಳಿ:ರಾಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ನಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆಬೆಳಿಗ್ಗೆ 7.30ರ ವೇಳೆಗೆಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ತಕ್ಕ ತಿರುಗೇಟು ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.ಮಂಗಳವಾರ ಪೂಂಛ್ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.