ಮಂಗಳವಾರ, ಆಗಸ್ಟ್ 4, 2020
22 °C

ಪುಲ್ವಾಮಾ ಗುಂಡಿನ ಚಕಮಕಿ: ಇಬ್ಬರು ಉಗ್ರರು ಸಾವು, ಯೋಧ ಹುತಾತ್ಮ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರು ಮತ್ತು ಸಿಆರ್‌ಪಿಎಫ್‌ ಯೋಧರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾ ಜಿಲ್ಲೆಯ ಬಾಂಡ್‌ಜೊ ಪ್ರದೇಶದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಘಟನಾ ಸ್ಥಳದಲ್ಲಿ ಉಗ್ರರ ಬಳಿ ಎರಡು ಎಕೆ–47 ರೈಫಲ್ ಇರುವುದು ಪತ್ತೆಯಾಗಿದ್ದು, ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಜಿಲ್ಲೆಯ ಕಪ್ರಾನ್ ಅರಣ್ಯ ಭಾಗದಲ್ಲಿ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ, ಭದ್ರತಾ ಪಡೆ ಸಿಬ್ಬಂದಿ ಶೋಧ ಕೈಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು