ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಾದ್ಯಂತ ಕರ್ಫ್ಯೂ ವಿಧಿಸಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

Last Updated 23 ಮಾರ್ಚ್ 2020, 16:16 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಂದು ರಾಜ್ಯದಲ್ಲಿ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದ್ದು, ಈ ಕ್ರಮಗಳನ್ನು ನಾಗರಿಕರು ಸೋಂಕು ತಡೆಗಟ್ಟುವ ಕ್ರಮಗಳಾಗಿ ನೋಡಬೇಕು ಎಂದು ಹೇಳಿದ್ದಾರೆ.

ಕೊರೊನಾವೈರಸ್ ಸೋಂಕು ಏಕಾಏಕಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ತಮ್ಮ ಸುರಕ್ಷತೆಗಾಗಿ ಮನೆಯಲ್ಲಿಯೇ ಇರಬೇಕೆಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಈಗಾಗಲೇ ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದರೂ ಕೂಡ, ಸೋಮವಾರ ರಸ್ತೆಗಳಲ್ಲಿ ಹಲವಾರು ಜನರು ಸೇರಿಕೊಂಡಿದ್ದರು. ಪ್ರಮುಖ ರಸ್ತೆಗಳಲ್ಲಿ ವಾಹನ ಚಾಲನೆ ಎಂದಿನಂತೆಯೇ ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

"ಜನರು ಕೋವಿಡ್-19 ವಿರುದ್ಧದ ಈ ಯುದ್ಧವನ್ನು ಗಂಭೀರವಾಗಿ ಪರಿಗಣಿಸಬೇಕು. ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ವಿಧಿಸಲಾಗಿರುವುದರಿಂದ ಮಾರ್ಚ್ 31 ರವರೆಗೆ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಿದ್ದರೂ ಕೂಡ ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಬೀದಿಗಳಲ್ಲಿ ಜನರು ಜಮಾಯಿಸುವ ಮೂಲಕ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಮನವಿ ಮಾಡಿದ್ದಾರೆ.

1. ಅಗತ್ಯ ಓಡಾಟವನ್ನು ಹೊರತುಪಡಿಸಿ ರಾಜ್ಯದ ಎಲ್ಲ ಗಡಿಗಳಲ್ಲಿ ಎಲ್ಲ ರೀತಿಯ ಪ್ರಯಾಣಗಳನ್ನು ಬಂದ್ ಮಾಡಲಾಗುತ್ತದೆ.

2. ಇಂಟರ್‌ಸಿಟಿ ಎಂಎಸ್‌ಆರ್‌ಟಿಸಿ ಬಸ್ ಮತ್ತು ಮೆಟ್ರೋ ಸೇರಿದಿಂತೆ ಎಲ್ಲ ರೀತಿಯ ಸಾರ್ವಜನಿಕ ಸೇವೆಯನ್ನು ಬಂದ್ ಮಾಡಲಾಗುತ್ತದೆ. ಎರಡು ಜನರಿಗಿಂತ ಹೆಚ್ಚು ಜನರನ್ನು ಕೂರಿಸಿಕೊಂಡು ಟ್ಯಾಕ್ಸಿ ಚಲಿಸುವಂತಿಲ್ಲ. ಒಬ್ಬರಿಗಿಂತ ಹೆಚ್ಚಾಗಿ ಆಟೋಗಳಲ್ಲಿ ಕೂರಿಸಿಕೊಂಡು ಹೋಗುವಂತಿಲ್ಲ.

3. ಅಂತರರಾಜ್ಯ ಬಸ್‌ ಮತ್ತು ಖಾಸಗಿ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ

4. ಹೋಂ ಕ್ವಾರಂಟೈನ್‌ನಲ್ಲಿರುವ ಯಾರೇ ಆದರೂ ಕೂಡ ಸೂಚನೆಯನ್ನು ಪಾಲಿಸಬೇಕು. ಇಲ್ಲದಿದ್ದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ

5. ನಿವಾಸಿಗಳು ಮನೆಯಲ್ಲಿಯೇ ಇರಬೇಕು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಾಗ ಕೇವಲ ಅನುಮತಿ ನೀಡಿರುವ ಚಟುವಟಿಕೆಗಳಿಗೆ ಮಾತ್ರ ಹೊರಬರಬೇಕು.

6. ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕೂ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ.

7. ವಾಣಿಜ್ಯ ಸ್ಥಾಪನೆ, ಕಚೇರಿಗಳು, ಕಾರ್ಖಾನೆಗಳು, ಕಾರ್ಯಾಗಾರಗಳು ಸೇರಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗುತ್ತದೆ. ಆದರೆ, ಅಗತ್ಯವಿರುವ ಔಷಧ ಉತ್ಪಾದನೆ ಮತ್ತು ಉತ್ಪಾದನಾ ಘಟಕಗಳನ್ನು ಅನುಮತಿಸಲಾಗುವುದು.

8. ಸರ್ಕಾರಿ ಕಚೇರಿಗಳು, ಅಂಗಡಿಗಳು ಮತ್ತು ಸಂಸ್ಥೆಗಳಿಗೆ ಈ ಅವಧಿಯಲ್ಲಿ ಕನಿಷ್ಠ ಸಿಬ್ಬಂದಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ಇದೆ.

9. ಅಗತ್ಯ ಸರಕು ಮತ್ತು ಸೇವೆಗಳನ್ನು ಒದಗಿಸುವ ಬ್ಯಾಂಕ್, ಎಟಿಎಂ, ಇನ್ಶೂರೆನ್ಸ್, ಫಿನ್‌ಟೆಕ್, ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು, ಟೆಲಿಕಾಂ, ಪೋಸ್ಟಲ್, ಅಂತರ್ಜಾಲ ಮತ್ತು ಡೇಟಾ ಸೇವೆಗಳು, ಆಹಾರ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಇ ಕಾಮರ್ಸ್ ಡೆಲಿವರಿ, ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳನ್ನು ಮಾತ್ರ ನಿರ್ಬಂಧಗಳಿಂದ ಹೊರಗಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT