ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮಹಾ' ವಿಶ್ವಾಸ ಗೆದ್ದ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ...

Last Updated 30 ನವೆಂಬರ್ 2019, 9:56 IST
ಅಕ್ಷರ ಗಾತ್ರ

ಮುಂಬೈ:ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌ ಪಕ್ಷದ ಮೈತ್ರಿ ಸರ್ಕಾರ ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದೆ

ವಿಶ್ವಾಸಮತ ಯಾಚನೆಗೂ ಮುನ್ನ ಹಂಗಾಮಿ ಸ್ಪೀಕರ್‌ ಆಗಿ ದೀಲಿಪ್‌ ಪಾಟೀಲ್‌ ಅವರನ್ನು ನೇಮಕ ಮಾಡಲಾಯಿತು.

ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ವಿಶ್ವಾಸಮತ ಯಾಚನೆ ಮಾಡುವನಿರ್ಣಯವನ್ನು ಮಂಡಿಸಿದರು. ತಲೆ ಎಣಿಕೆ ಕಾರ್ಯ ನಡೆಯುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದರು.

ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿ ಸರ್ಕಾರದ ಪರವಾಗಿ 169 ಮತಗಳು ಬಿದ್ದವು.

288 ಸ್ಥಾನಗಳ ಪೈಕಿ ಬಿಜೆಪಿ 105, ಶಿವಸೇನಾ56, ಕಾಂಗ್ರೆಸ್‌44, ಎನ್‌ಸಿಪಿ 54, ಇತರರು 29 ಸ್ಥಾನಗಳನ್ನು ಪಡೆದಿದ್ದಾರೆ. ಬಹುಮತ ಸಾಬೀತುಪಡಿಸಲು 145 ಮತಗಳು ಬೇಕಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT