ಬುಧವಾರ, ಜೂಲೈ 8, 2020
28 °C

ಮಹಾರಾಷ್ಟ್ರ: ಮಿತ್ರಪಕ್ಷಗಳ ನಾಯಕರ ಜತೆ ಇಂದು ಉದ್ಧವ್ ಠಾಕ್ರೆ ಸಭೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Uddhav Thackeray

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ರಪಕ್ಷಗಳ ಮುಖಂಡರ ಜತೆ ಇಂದು ಸಭೆ ನಡೆಸಲಿದ್ದಾರೆ. ಕೆಲವು ಭಾಗಗಳಲ್ಲಿ ಲಾಕ್‌ಡೌನ್‌ ತೆರವುಗೊಳಿಸುವ ಬಗ್ಗೆ ಚರ್ಚಿಸುವ ಸಲುವಾಗಿ ಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ಬಗ್ಗೆ ನಾಯಕರು ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭೆ ಬಿಜೆಪಿ ಸಂಸದ ನಾರಾಯಣ್ ರಾಣೆ ಸೋಮವಾರ ಮಹಾರಾಷ್ಟ್ರ ರಾಜ್ಯಪಾಲ ಬಿ. ಎಸ್. ಕೋಶಿಯಾರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿಯೂ ಉದ್ಧವ್ ಸಭೆಗೆ ಹೆಚ್ಚಿನ ಮಹತ್ವ ದೊರೆತಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಮಾಜಿ ಸಿಎಂ ನಾರಾಯಣ್‌ ರಾಣೆ ಮನವಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು