‘ಆಧಾರ್ ನಮೂದಿಸಬೇಡಿ’: ವಿಶ್ವವಿದ್ಯಾಲಯಗಳಿಗೆ ಯುಜಿಸಿ ನಿರ್ದೇಶನ

ನವದೆಹಲಿ: ವಿದ್ಯಾರ್ಥಿಗಳ ಪದವಿ ಮತ್ತು ಇತರೆ ಪ್ರಮಾಣಪತ್ರಗಳಲ್ಲಿ ಆಧಾರ್ ಸಂಖ್ಯೆ ನಮೂದಿಸಬಾರದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ.
‘ಆಧಾರ್ ನಮೂದಿಸುವುದರಿಂದ, ಆಧಾರ್ ಕಾಯ್ದೆ 2016ರ ಅಡಿಯಲ್ಲಿ ವಿದ್ಯಾರ್ಥಿಗಳ ಭದ್ರತೆ ಮತ್ತು ಗೋಪ್ಯತೆ ಉಲ್ಲಂಘಿಸಿದಂತಾಗುತ್ತದೆ’ ಎಂದು ಯುಜಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ಕಾರ್ಯದರ್ಶಿ ರಜನೀಶ್ ಜೈನ್ ಉಲ್ಲೇಖಿಸಿದ್ದಾರೆ.
ವಿದ್ಯಾರ್ಥಿಗಳ ಪ್ರಮಾಣಪತ್ರಗಳಲ್ಲಿ ಆಧಾರ್ ನಮೂದಿಸುವಂತೆ ಕಳೆದ ವರ್ಷ ನೀಡಿದ್ದ ಆದೇಶವನ್ನು ಯುಜಿಸಿ ಈ ಮೂಲಕ ಹಿಂಪಡೆದಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.