ಗುರುವಾರ , ಫೆಬ್ರವರಿ 25, 2021
18 °C

ಆಧಾರ್‌: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆಧಾರ್‌ ಕಾರ್ಡ್‌ ಅಧಿಸೂಚನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರ ಮತ್ತು  ವಿಶಿಷ್ಟ ಗುರುತುಚೀಟಿ ಪ್ರಾಧಿಕಾರದ ಪ್ರತಿಕ್ರಿಯೆಯನ್ನು ಕೋರಿದೆ.

ಎಸ್‌.ಎ. ಬಾಬ್ಡೆ ಮತ್ತು ಬಿ.ಆರ್‌.ಗವಾಯಿ ಅವರನ್ನೊಳಗೊಂಡ ಪೀಠವು ಆಧಾರ್‌ ಸಿಂಧುತ್ವ ಮತ್ತು ಇತರ ಕಾನೂನು (ತಿದ್ದುಪಡಿ) ಅಧಿಸೂಚನೆ 2019 ಮತ್ತು ಆಧಾರ್‌ ನಿಯಂತ್ರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಮತ್ತು ಪ್ರಾಧಿಕಾರದ ಪ್ರತಿಕ್ರಿಯೆ ಕೇಳಿದೆ.  

2019ರ ಗಜೆಟ್‌ನಲ್ಲಿ ಈ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ನಿವೃತ್ತ ಸೇನಾ ಅಧಿಕಾರಿ ಎಸ್‌.ಜಿ. ಒಂಬತ್‌ಕೆರೆ ಮತ್ತು ಮಾನವಹಕ್ಕುಗಳ ಕಾರ್ಯಕರ್ತ ಬೇಜ್ವಾಡಾ ವಿಲ್ಸನ್‌ ಅವರು ಸಲ್ಲಿಸಿದ ಅರ್ಜಿಯಲ್ಲಿ ಅಧಿಸೂಚನೆ ಮತ್ತು ನಿಯಂತ್ರಣ ನಿಯಮಗಳು ಸಂವಿಧಾನವು ನಾಗರಿಕರಿಗೆ ನೀಡಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದರು.

ಈ ಅಧಿಸೂಚನೆಯು ಆಧಾರ್‌ ವ್ಯವಸ್ಥೆಯನ್ನು ಖಾಸಗಿಯವರು ಹಿಂಬಾಗಿಲಿನಿಂದ ಪಡೆಯುವ ಅವಕಾಶ ಕಲ್ಪಿಸುತ್ತಿದೆ ಎಂದು ಆರೋಪಿಸಲಾಗಿದೆ. ವಕೀಲರಾದ ವಿಪಿನ್‌ ನಾಯರ್‌ ಈ ಅರ್ಜಿಯ ಪರ ವಾದಿಸುತ್ತಿದ್ದಾರೆ.

ಆಧಾರ್‌ ಡೇಟಾಬೇಸ್‌ಗೆ ಅವಕಾಶ ಪಡೆದಿರುವ ಖಾಸಗಿ ಸಂಸ್ಥೆಯು ಸಾರ್ವಜನಿಕ ಕೆಲಸವನ್ನು ನಿರ್ವಹಿಸುತ್ತಿದ್ದು, ಲಭ್ಯ ಮಾಹಿತಿಯನ್ನು ಸಂಗ್ರಹಿಸಿ ಇಡದಂತೆ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ. 

ಅಲ್ಲದೆ 2019ರ ನಿಯಂತ್ರಣ ನಿಯಮಗಳು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದ್ದು, ಅವು ಸಂವಿಧಾನ ಬಾಹಿರ ಎಂದು ಘೋಷಿಸುವಂತೆ ಅರ್ಜಿದಾರರು ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು