ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಕೋರಿಕೆ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿಂದು ಮತ್ತೊಮ್ಮೆ ಕಾಶ್ಮೀರ ಚರ್ಚೆ

ಪಾಕ್ ಪತ್ರವನ್ನು ಪ್ರತಿಧ್ವನಿಸಿದ ಚೀನಾ
Last Updated 17 ಡಿಸೆಂಬರ್ 2019, 7:00 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ (ನ್ಯೂಯಾರ್ಕ್): ಚೀನಾ ಕೋರಿಕೆ ಮೇರೆಗೆ ಕಾಶ್ಮೀರದಲ್ಲಿ ನಡೆದಿರುವ ಈಚೆಗಿನ ವಿದ್ಯಮಾನಗಳನ್ನು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮಹತ್ವದ ಸಭೆ ಇಂದು (ಡಿ.17) ನಡೆಯಲಿದೆ.

ಕಳೆದ ಆಗಸ್ಟ್‌ನಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ನಂತರ ಪಾಕಿಸ್ತಾನದ ಮಿತ್ರರಾಷ್ಟ್ರ ಚೀನಾದವಿನಂತಿ ಮೇರೆಗೆಭದ್ರತಾ ಮಂಡಳಿಯ ಗೌಪ್ಯ ಸಮಾಲೋಚನಾ ಸಭೆ ನಡೆದಿತ್ತು.

ಡಿ.12ರಂದು ಭದ್ರತಾ ಮಂಡಳಿಗೆ ಬರೆದಿದ್ದ ಪತ್ರದಲ್ಲಿ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಮೆಹಮೂದ್ ಖುರೇಷಿ ಕಾಶ್ಮೀರದಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಆತಂಕ ವ್ಯಕ್ತಪಡಿಸಿದ್ದರು.

‘ಕಾಶ್ಮೀರದಲ್ಲಿ ಈಚೆಗೆ ನಡೆದ ಬೆಳವಣಿಗೆಗಳು, ಅಲ್ಲಿನ ಸದ್ಯದ ಪರಿಸ್ಥಿತಿ ಮತ್ತು ಉದ್ನಿಗ್ನ ಸ್ಥಿತಿ ಹೆಚ್ಚಾಗುವ ಆತಂಕದ ಹಿನ್ನೆಲೆಯಲ್ಲಿ ಚೀನಾ ಸಹ ಪಾಕಿಸ್ತಾನದ ಅಭಿಪ್ರಾಯವನ್ನು ಒಪ್ಪಿಕೊಳ್ಳುತ್ತದೆ ಮತ್ತು ಪ್ರತಿಧ್ವನಿಸುತ್ತದೆ. ಈ ಹಿನ್ನೆಲೆಯಲ್ಲಿ ಭದ್ರತಾ ಮಂಡಳಿಗೆ ಕಾಶ್ಮೀರದಲ್ಲಿ ನಡೆದ ಈಚಿನ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲು ಕೋರುತ್ತದೆ’ ಎಂದು ವಿಶ್ವಸಂಸ್ಥೆಯಲ್ಲಿರುವ ಚೀನಾದ ಪ್ರತಿನಿಧಿ ಭದ್ರತಾ ಮಂಡಳಿ ಸದಸ್ಯರಿಗೆ ಪತ್ರ ಬರೆದಿದ್ದಾರೆ.

ಭದ್ರತಾ ಮಂಡಳಿ ಸಭೆ ಮಂಗಳವಾರ ನಡೆಯಲಿದೆ ಎಂದು ಹಲವು ರಾಜತಾಂತ್ರಿಕರು ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT