ಶುಕ್ರವಾರ, ಸೆಪ್ಟೆಂಬರ್ 18, 2020
24 °C

ಯಾರ ಮಗನಾದರೇನು? ಗೂಂಡಾ ವರ್ತನೆ ಸಹಿಸಲ್ಲ: ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ನೌಕರನ ಮೇಲೆ ಕ್ರಿಕೆಟ್ ಬ್ಯಾಟಿನಿಂದ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಆಕಾಶ್ ವಿಜಯವರ್ಗೀಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಪುತ್ರ. 

‘ಯಾರ ಮಗನಾದರೇನು, ಗೂಂಡಾ ವರ್ತನೆಯನ್ನು ನಾವು ಸಹಿಸುವುದಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎಂದು ನ್ಯೂಸ್‌ 18 ಸುದ್ದಿ ವಾಹಿನಿ ವರದಿ ಮಾಡಿದೆ. 

ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವವರು ಪಕ್ಷದಲ್ಲಿ ಮುಂದುವರೆಯಲು ಅನರ್ಹರು ಎಂದು ಮೋದಿ ಕಿಡಿಕಾರಿದ್ದಾರೆ ಎನ್ನಲಾಗಿದೆ. 

ಜೂನ್ 26ರಂದು ಆಕಾಶ್ ವಿಜಯವರ್ಗೀಯ ಅಧಿಕಾರಿಗೆ ಥಳಿಸಿದ್ದರು. ನಂತರ ಅವರನ್ನು ಪೊಲೀಸರು ಬಂದಿಸಿದ್ದರು. ಇದೀಗ ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು