ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಲು ಶೌಚಾಲಯದಲ್ಲಿ ಕೈದಿ ಸಾವು

Last Updated 24 ಜೂನ್ 2020, 7:55 IST
ಅಕ್ಷರ ಗಾತ್ರ

ಬಲರಾಮ್‌ಪುರ (ಉತ್ತರ ಪ್ರದೇಶ): 30 ವರ್ಷ ವಯಸ್ಸಿನ ವಿಚಾರಣಾಧೀನ ಕೈದಿಯೊಬ್ಬರು ಜಿಲ್ಲಾ ಕಾರಾಗೃಹದ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದಾರೆ.

ಪತ್ನಿ ಕೊಲೆ ಆರೋಪದಲ್ಲಿ ಏಪ್ರಿಲ್ 19ರಿಂದ ಜೈಲಿನಲ್ಲಿದ್ದ ತುಳಸಿಪುರದ ಜೈಪಾಲ್ ಎಂಬುವರು ಶೌಚಾಲಯದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ನಿಖರ ಕಾರಣವನ್ನು ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ದೇವ್ ರಂಜನ್ ವರ್ಮಾ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT