ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿ

ಕೇಂದ್ರ ಮಧ್ಯಂತರ ಬಜೆಟ್‌ 2019
Last Updated 1 ಫೆಬ್ರುವರಿ 2019, 6:15 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ 2019–20 ಮಧ್ಯಂತರ ಬಜೆಟ್‌ ಮಂಡನೆಗೆ ವಿತ್ತ ಸಚಿವ ಪಿಯೂಷ್‌ ಗೋಯಲ್‌ ಸಿದ್ಧರಾಗಿದ್ದಾರೆ. ಈಗಾಗಲೇ ಬಜೆಟ್‌ ಪ್ರತಿಗಳು ಸಂಸತ್‌ ಭವನ ತಲುಪಿದ್ದು, ಬೆಳಿಗ್ಗೆ 11ಕ್ಕೆ ಬಜೆಟ್‌ ಮಂಡನೆ ಆರಂಭವಾಗಲಿದೆ.

ಸಂಪ್ರದಾಯದಂತೆ ಬಜೆಟ್‌ ಮಂಡನೆಗೂ ಮುನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ‌ವಿತ್ತ ಸಚಿವ ಪಿಯೂಷ್‌ ಗೋಯಲ್‌ ಭೇಟಿ ಮಾಡಿದ್ದಾರೆ.

ಬಜೆಟ್‌ ಮಂಡನೆ ಹಿನ್ನೆಲೆಯಲ್ಲಿ ಶುಕ್ರವಾರ ಷೇರು ಮಾರುಕಟ್ಟೆ ಜಿಗಿತದೊಂದಿಗೆ ಶುರುವಾಗಿದೆ. ಸೆನ್‌ಸೆಕ್ಸ್‌ 100 ಅಂಶ ಏರಿಕೆಯಾಗಿದ್ದು, ನಿಫ್ಟಿ 10,860 ಮುಟ್ಟಿದೆ.

ಇಂದು ಮಂಡನೆಯಾಗಲಿರುವ ಬಜೆಟ್‌ ಮುಖ್ಯವಾಗಿ ಕೃಷಿ ಕ್ಷೇತ್ರದಲ್ಲಿ ಹೂಡಿಕೆ, ಆರೋಗ್ಯ ವಲಯ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಲಾಭಕಾರಿಯಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಸಂಸತ್‌ ಹೊರಭಾಗದಲ್ಲಿ ಬಜೆಟ್‌ ಪ್ರತಿಗಳನ್ನು ಇಡಲಾಗಿರುವ ಚೀಲಗಳ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ. ಪಿಯೂಷ್‌ ಗೋಯಲ್‌ ರಾಷ್ಟ್ರಪತಿ ಭವನದಿಂದ ಸಂಸತ್ತಿಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT