ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡೆಗೆ ₹214 ಕೋಟಿ ಅನುದಾನ

Last Updated 2 ಜುಲೈ 2019, 7:14 IST
ಅಕ್ಷರ ಗಾತ್ರ

ನವದೆಹಲಿ: ಕ್ರೀಡಾ ಇಲಾಖೆಗೆ ಕೇಂದ್ರ ಸರ್ಕಾರ ಈ ಬಾರಿ ₹2216 ಕೋಟಿ ಅನುದಾನ ನೀಡಿದೆ. ಕಳೆದ ವರ್ಷ ₹2002 ಕೋಟಿ ಅನುದಾನ ನೀಡಿತ್ತು. ಕಳೆದ ವರ್ಷಕ್ಕಿಂತ ₹214 ಕೋಟಿ ಹೆಚ್ಚುವರಿಯಾಗಿ ನೀಡಲಾಗಿದೆ. ಇದರ ಜತೆಗೆ ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರಕ್ಕೆ ಅನುದಾನ ಹಾಗೂ ಕ್ರೀಡಾಪಟುಗಳಿಗೆ ನೀಡುವ ಪ್ರೋತ್ಸಾಹಧನವನ್ನು ಸಹ ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಕ್ರೀಡಾಪ್ರಾಧಿಕಾರಕ್ಕೆ ₹450 ಕೋಟಿ ನೀಡಲಾಗಿದ್ದು, 55 ಕೋಟಿ ಹೆಚ್ಚುವರಿಯಾಗಿ ಸಿಕ್ಕಿದೆ. ರಾಷ್ಟ್ರೀಯ ಕ್ರೀಡಾಕೂಟ, ಪರಿಕರ ಹಾಗೂ ಇತರ ಕ್ರೀಡಾಚಟುವಟಿಕೆಗಳಿಗೆ ಅನುದಾನ ನೀಡಲಾಗಿದೆ. ಇದಲ್ಲದೇ ಕ್ರೀಡಾಪಟುಗಳ ಕೌಶಲ ಅಭಿವೃದ್ಧಿಗೆ ಕಳೆದ ಬಾರಿ ಕೇವಲ ₹2 ಕೋಟಿ ನೀಡಲಾಗಿತ್ತು. ಆದರೆ, ಈ ಬಾರಿ ₹ 70 ಕೋಟಿಗೆ ಹೆಚ್ಚಿಸಲಾಗಿದೆ.

ಕ್ರೀಡಾಪುಟಗಳಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ₹63 ಕೋಟಿಯಿಂದ ₹89 ಕೋಟಿಗೆ ಹೆಚ್ಚಿಸಲಾಗಿದೆ. ಈ ನಡುವೆ ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗೆ ಮಾತ್ರ ಹೆಚ್ಚುವರಿ ಅನುದಾನ ನೀಡಿಲ್ಲ.

ಅದಕ್ಕೆ ಕಳೆದ ವರ್ಷ ₹245.14 ಕೋಟಿ ನೀಡಲಾಗಿತ್ತು. ಈಗ ಅದನ್ನು ಸ್ವಲ್ಪ ಕಡಿತಗೊಳಿಸಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT