ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್ಡೌನ್ ನಿಯಮ ಸಡಿಲಿಕೆಯ ಮೂರು ಹಂತಗಳಲ್ಲಿ ಮೊದಲನೆ ಹಂತದ ಮೊದಲ ದಿನವಾದ ಇಂದು ದೇಶಾದ್ಯಂತ ಸ್ಥಿತಿಗತಿಗಳ ಅವಲೋಕನ ಹಾಗೂ ಇತರೆ ಅಭಿವೃದ್ಧಿ ವಿಷಯಗಳು, ಆರ್ಥಿಕ ಪ್ರಗತಿ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಿ ಎರಡನೆ ವರ್ಷಕ್ಕೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆ. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ ಎಂದು ಕಚೇರಿಯ ಮೂಲಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 8,392 ಕೊರೊನಾ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, 230 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ನಿಯಂತ್ರಣ ಸಂಬಂಧ ದೇಶದಾದ್ಯಂತ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಮುಖವಾಗಿ ಚರ್ಚೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.