ಸೋಮವಾರ, ಮಾರ್ಚ್ 30, 2020
19 °C

ಬಾಡಿಗೆ ತಾಯ್ತನ (ನಿಯಂತ್ರಣ) ಮಸೂದೆಗೆ ಸಂಪುಟ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ರಾಜ್ಯಸಭೆ ಆಯ್ಕೆ ಸಮಿತಿ ಮಾಡಿದ್ದ ಪ್ರಮುಖ ಶಿಫಾರಸುಗಳನ್ನು ಅಳವಡಿಸಿದ ನಂತರ, ಬಾಡಿಗೆ ತಾಯ್ತನ (ನಿಯಂತ್ರಣ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

‘ಈ ಮೊದಲು, ಮಹಿಳೆಯ ಹತ್ತಿರದ ಬಂಧು ಮಾತ್ರ ಬಾಡಿಗೆ ತಾಯಿಯಾಗಲು ಅವಕಾಶ ಇತ್ತು. ಆದರೆ, ಬಾಡಿಗೆ ತಾಯಿಯಾಗಲು ಇಚ್ಛೆ ವ್ಯಕ್ತಪಡಿಸುವ ಯಾವುದೇ ಮಹಿಳೆಗೆ ಸಹ ಅನುಮತಿ ನೀಡಬೇಕು ಎಂಬುದಾಗಿ ಸಂಸದೀಯ ಸಮಿತಿಯ ಶಿಫಾರಸು ಮಾಡಿತ್ತು. ಈ ಅಂಶವನ್ನು ಪರಿಷ್ಕೃತ ಮಸೂದೆಯಲ್ಲಿ ಸೇರಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯಸಭಾದ 23 ಸದಸ್ಯರಿರುವ ಸಮಿತಿಯು 15 ಪ್ರಮುಖ ಬದಲಾವಣೆಗಳನ್ನು ಶಿಫಾರಸು ಮಾಡಿದೆ. ಅವುಗಳನ್ನೂ ಮಸೂದೆಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು