ಭಾನುವಾರ, ಜೂನ್ 7, 2020
28 °C

ಸಚಿವ ಹರ್ಷವರ್ಧನ್‌ ಡಬ್ಲ್ಯುಎಚ್‌ಒ ಕಾರ್ಯಕಾರಿ ಮಂಡಳಿ ಅಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಭಾರತದಲ್ಲಿ ಕೋವಿಡ್‌–19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಕಾರ್ಯಕಾರಿ ಮಂಡಳಿ ಮುಖ್ಯಸ್ಥರಾಗಿ ಮೇ 22ರಂದು ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

24 ಸದಸ್ಯರಿರುವ ಡಬ್ಲ್ಯುಎಚ್‌ಒ ಕಾರ್ಯಕಾರಿ ಮಂಡಳಿಗೆ ಪ್ರಸ್ತುತ ಜಪಾನ್‌ನ ಡಾ.ಹಿರೊಕಿ ನಾಕಟನಿ ಅಧ್ಯಕ್ಷರಾಗಿದ್ದಾರೆ. ಭಾರತದಿಂದ ನಾಮನಿರ್ದೇಶಿತರಾದ ಹರ್ಷವರ್ಧನ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಪ್ರಸ್ತಾವನೆಗೆ 194 ರಾಷ್ಟ್ರಗಳು ಇರುವ ವಿಶ್ವ ಆರೋಗ್ಯ ಸಭೆ ಸಹಿ ಹಾಕಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು