ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19| ಭಾರತದಲ್ಲಿ 28 ಪ್ರಕರಣಗಳು ಪತ್ತೆ; ವಿದೇಶಿ ಪ್ರಯಾಣಿಕರ ಮೇಲೆ ನಿಗಾ

Last Updated 4 ಮಾರ್ಚ್ 2020, 13:13 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್ 19 ವೈರಸ್ಸೋಂಕು ಹರಡುತ್ತಿದ್ದಂತೆ ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಬುಧವಾರ ಸೂಚನೆ ನೀಡಿದ್ದಾರೆ. ಇಲ್ಲಿಯವರಿಗೆ 28 ಮಂದಿಗೆ ಸೋಂಕು ತಗಲಿರುವ ಪ್ರಕರಣ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ 12 ದೇಶಗಳಿಂದ ಬಂದ ಪ್ರಯಾಣಿಕರನ್ನು ಮಾತ್ರ ವೈದ್ಯಕೀಯ ತಪಾಸಣೆಗೊಳಪಡಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವುದೇ ದೇಶದಿಂದ ಬರುವ ಎಲ್ಲಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುವುದುಎಂದು ಸಚಿವರು ಹೇಳಿದ್ದಾರೆ.

ಕೋವಿಡ್ 19 ವೈರಸ್ ಸೋಂಕು ಬಗ್ಗೆ ಬುಧವಾರ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಸಚಿವರು ಆಗ್ರಾದಲ್ಲಿನ ಕುಟುಂಬವೊಂದರ 6 ಸದಸ್ಯರಿಗೆ ಸೋಂಕು ತಗಲಿದೆ ಎಂದು ಹೇಳಿದ್ದಾರೆ.

ಆದಾಗ್ಯೂ, ಇಟಲಿಯ 21 ಪ್ರಜೆಗಳ ಪೈಕಿ 14 ಮಂದಿಗೆ ವೈರಸ್ ಸೋಂಕು ತಗಲಿದೆ. ಅದೇಜೈಪುರದಲ್ಲಿರುವಇಟಲಿಯ ಪ್ರವಾಸಿಗರಿಬ್ಬರಿಗೆಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT