ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

#MeToo: ಭಾರತಕ್ಕೆ ಬಂದಿಳಿದ ಕೇಂದ್ರ ಸಚಿವ ಎಂ.ಜೆ ಅಕ್ಬರ್

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸಚಿವ
Last Updated 14 ಅಕ್ಟೋಬರ್ 2018, 4:34 IST
ಅಕ್ಷರ ಗಾತ್ರ

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಎಂ.ಜೆ ಅಕ್ಬರ್ ಭಾನುವಾರ ನೈಜೀರಿಯಾದಿಂದಭಾರತಕ್ಕೆ ಆಗಮಿಸಿದ್ದಾರೆ.

ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅಕ್ಬರ್, ‘ನನ್ನ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆಆಮೇಲೆ ಪ್ರತಿಕ್ರಿಯೆ ನೀಡಲಿದ್ದೇನೆ’ ಎಂದು ಹೇಳಿದ್ದಾರೆ.


ಬಿಜೆಪಿಯು ಅಕ್ಬರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಇವರು ಸಚಿವ ಸ್ಥಾನದಲ್ಲಿ ಮುಂದುವರಿಯುವ ಬಗ್ಗೆ ಯಾವ ಖಾತರಿಯೂ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪತ್ರಕರ್ತರಾಗಿದ್ದ, ಸದ್ಯ ವಿದೇಶಾಂಗ ವ್ಯವಹರಾಗಳ ಇಲಾಖೆಯ ರಾಜ್ಯ ಖಾತೆ ಸಚಿವರಾಗಿರುವ ಎಂ.ಜೆ. ಅಕ್ಬರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮೀ ಟೂ ಅಭಿಯಾನದ ಮೂಲಕ ಹಲವು ಪತ್ರಕರ್ತೆಯರು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಮೀ ಟೂ ಅಭಿಯಾನದ ಮೂಲಕ ಕೇಳಿ ಬಂದ ಲೈಂಗಿಕ ಕಿರುಕುಳದ ಆರೋಪದ ಸತ್ಯಾಸತ್ಯತೆಯನ್ನು ಪರಿಶೀಲಿಸಲಿದ್ದೇವೆ ಎಂದು ಹೇಳಿದ್ದರು.

ಎಂ.ಜೆ ಅಕ್ಬರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಇಲ್ಲವೇ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT