ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

#MeToo: ಸಚಿವ ಸ್ಥಾನಕ್ಕೆ ಎಂ.ಜೆ. ಅಕ್ಬರ್ ರಾಜೀನಾಮೆ

ಲೈಂಗಿಕ ಕಿರುಕುಳದ ಆರೋಪ
Last Updated 17 ಅಕ್ಟೋಬರ್ 2018, 12:13 IST
ಅಕ್ಷರ ಗಾತ್ರ

ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ಬುಧವಾರ ಸಂಜೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್‌ ಮಾಡಿದ್ದು, ರಾಜೀನಾಮೆ ಕುರಿತ ಅಕ್ಬರ್ ಅವರ ಪ್ರಕಟಣೆಯಪ್ರತಿಯನ್ನೂ ಲಗತ್ತಿಸಿದೆ.

‘ನನ್ನ ವಿರುದ್ಧ ಮಾಡಲಾಗಿರುವ ಸುಳ್ಳು ಆರೋಪಗಳ ಬಗ್ಗೆ ನ್ಯಾಯಾಲಯದಲ್ಲಿ ವೈಯಕ್ತಿಕ ಸಾಮರ್ಥ್ಯದ ಮೂಲಕ ನ್ಯಾಯ ಪಡೆಯಲು ನಿರ್ಧರಿಸಿದ್ದೇನೆ. ಹೀಗಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಆಭಾರಿಯಾಗಿದ್ದೇನೆ’ ಎಂದು ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಿಯಾ ರಮಣಿ ಸೇರಿದಂತೆ 12ಕ್ಕೂ ಹೆಚ್ಚು ಪತ್ರಕರ್ತೆಯರು #MeToo ಅಭಿಯಾನದ ಮೂಲಕ ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಕ್ಬರ್‌ ಜತೆ ಕೆಲಸ ಮಾಡುತ್ತಿದ್ದಾಗ ಅಥವಾ ಕೆಲಸದ ಸಂದರ್ಶನಕ್ಕೆ ಹಾಜರಾಗಿದ್ದಾಗ ಅವರು ಅಸಭ್ಯವಾಗಿ ವರ್ತಿಸಿದ್ದರು ಎಂದು ಈ ಪತ್ರಕರ್ತೆಯರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು.

ಆದರೆ, ಅಕ್ಬರ್ ಇದನ್ನು ನಿರಾಕರಿಸಿದ್ದಾರೆ. ಅಲ್ಲದೆ, ಆರೋಪ ಮಾಡಿದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯದಲ್ಲಿ ಅಪರಾಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT