ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಣಾಮ: ವಿ.ವಿಗಳು ಪರೀಕ್ಷೆ ರದ್ದುಪಡಿಸಲಿ: ಕಪಿಲ್‌ ಸಿಬಲ್‌

Last Updated 28 ಜೂನ್ 2020, 13:25 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳು ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ನಡೆಸಬಾರದು ಎಂದು ಕೇಂದ್ರದ ಮಾಜಿ ಸಚಿವ ಕಪಿಲ್‌ ಸಿಬಲ್‌ ಅಭಿಪ್ರಾಯಪಟ್ಟಿದ್ದಾರೆ.

ಆನ್‌ಲೈನ್‌ ಪರೀಕ್ಷೆ ನಡೆಸುವುದರಿಂದ ಬಡ ವಿದ್ಯಾರ್ಥಿಗಳಿಗೆ ತಾರತಮ್ಯ ಎಸಗಿದಂತಾಗಲಿದೆ. ಹೀಗಾಗಿ, ಅದನ್ನೂ ಮಾಡಬಾರದು ಎಂದು ಪ್ರತಿಪಾದಿಸಿದರು.

ತರಗತಿಗಳು ನಡೆಯದೇ ಬಹುತೇಕ ಶೈಕ್ಷಣಿಕ ವರ್ಷದ ಅರ್ಧ ಅವಧಿ ಮುಗಿದಿದೆ. ಕೋವಿಡ್‌ ಪಿಡುಗು ಇನ್ನು ಎಷ್ಟುದಿನ ಬಾಧಿಸಲಿದೆ ಎಂಬುದು ತಿಳಿಯುತ್ತಿಲ್ಲ. ಹೀಗಾಗಿ, ಪ್ರಸಕ್ತ ಶೈಕ್ಷಣಿಕ ವರ್ಷ ಸೇರಿದಂತೆ ಎರಡು ವರ್ಷಗಳಿಗೆ 10ನೇ ತರಗತಿಗಳಿಗೂ ಪರೀಕ್ಷೆಯನ್ನು ಕೈಬಿಡಬೇಕು. ಆ ನಂತರ ಪರಿಸ್ಥಿತಿ ಆಧರಿಸಿ ತೀರ್ಮಾನ ಕೈಗೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT