ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನಾವ್ ಅತ್ಯಾಚಾರ ಪ್ರಕರಣ: ಸಮಯ ಕೇಳಿದ ಸಿಬಿಐ

Last Updated 17 ಆಗಸ್ಟ್ 2019, 19:46 IST
ಅಕ್ಷರ ಗಾತ್ರ

ನವದೆಹಲಿ: 2017ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಲು ಒಂದು ವಾರ ಸಮಯ ನೀಡುವಂತೆ ದೆಹಲಿ ಕೋರ್ಟ್‌ಗೆ ಸಿಬಿಐ ಶನಿವಾರ ಮನವಿ ಮಾಡಿದೆ.

ಬಿಜೆಪಿಯ ಶಾಸಕ ಕುಲದೀಪ್ ಸೆಂಗರ್ ಹಾಗೂ ಇತರ ಮೂವರು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪವಿದೆ. ಅತ್ಯಾಚಾರಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳು ದಾಖಲಾಗಿವೆ. ಇವುಗಳನ್ನು ಉತ್ತರ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಲಾಗಿತ್ತು.

‘ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ. ಸದ್ಯದಲ್ಲೇ ದೋಷಾ ರೋಪ ಪಟ್ಟಿ ಸಲ್ಲಿಸಲಾಗುವುದು’ ಎಂದು ಹಿರಿಯ ವಕೀಲ ಅಶೋಕ್ ನ್ಯಾಯಾಲಯಕ್ಕೆ ತಿಳಿಸಿದರು. ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿ ಶುಭಂ ಸಿಂಗ್ ಅವರ ಪರ ವಕೀಲ ಸುನೀಲ್ ಕುಮಾರ್ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT