ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನಾವ್ ಕಾರು ಅಪಘಾತ: ತನಿಖೆ ಪೂರ್ಣಗೊಳಿಸಲು ಸಿಬಿಐಗೆ 2 ವಾರ ಕಾಲಾವಕಾಶ 

Last Updated 19 ಆಗಸ್ಟ್ 2019, 6:44 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ತಿಂಗಳು ರಾಯ್‌ಬರೇಲಿಯಲ್ಲಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರುಅಪಘಾತಕ್ಕೀಡಾದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸಿಬಿಐಗೆ ಹೆಚ್ಚುವರಿ 2 ವಾರ ಕಾಲಾವಕಾಶ ನೀಡಲಾಗಿದೆ.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಂತ್ರಸ್ತೆಯ ವಕೀಲರಿಗೆ₹5 ಲಕ್ಷ ಮಧ್ಯಂತರ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೋಮವಾರ ಆದೇಶಿಸಿದೆ.

ಈ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ನಾಲ್ಕು ವಾರ ನೀಡಬೇಕೆಂದು ಸಿಬಿಐ ಒತ್ತಾಯಿಸಿತ್ತು. ಆದರೆ ನ್ಯಾಯಾಲಯ ಹೆಚ್ಚುವರಿ 2 ವಾರಗಳ ಕಾಲಾವಕಾಶ ಕಲ್ಪಿಸಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಸಂತ್ರಸ್ತೆ ಮತ್ತು ವಕೀಲರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ:ಬಿಜೆಪಿ ಶಾಸಕನ ವಿರುದ್ಧ ಕೇಸು ದಾಖಲು
ಬಿಜೆಪಿ ಶಾಸಕ ಅತ್ಯಾಚಾರವೆಸಗಿದ್ದರೆ ಅದನ್ನು ನೀವು ಪ್ರಶ್ನಿಸಬಾರದು: ರಾಹುಲ್ ಗಾಂಧಿ

ಉನ್ನಾವ್ ಅತ್ಯಾಚಾರ: ಆರೋಪ ಹೊರಿಸಿದ್ದಕ್ಕಾಗಿ ಬೆಲೆ ತೆರಬೇಕಾಯಿತೇ ಸಂತ್ರಸ್ತೆ?
ಸಂತ್ರಸ್ತೆಗೆ ಅಪಘಾತ: ಸದನದಲ್ಲಿ ಗದ್ದಲ

ನನ್ನ ಮನೆಗೆ ಬಂದು ಬೆದರಿಕೆಯೊಡ್ಡಿದ್ದರು: ಉನ್ನಾವ್ ಸಂತ್ರಸ್ತೆಯಿಂದ ಸಿಜೆಐಗೆ ಪತ್ರ
ಬಹಳ ಹಿಂದೆಯೇ ಕುಲ್‌ದೀಪ್ ಸೆಂಗಾರ್‌ನ್ನು ಪಕ್ಷದಿಂದ ಅಮಾನತು ಮಾಡಿದ್ದೆವು: ಬಿಜೆಪಿ
ಉನ್ನಾವ್‌ ಅತ್ಯಾಚಾರ ಪ್ರಕರಣ: ಸುಪ್ರೀಂಕೋರ್ಟ್‌ ಸ್ವಯಂಪ್ರೇರಿತ ವಿಚಾರಣೆ ನಾಳೆ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣದಲ್ಲಿ ಬಿಜೆಪಿ ಕೈವಾಡ?
ಉನ್ನಾವ್ ಅತ್ಯಾಚಾರ ಆರೋಪಿ ಶಾಸಕ ಕುಲ್‌ದೀಪ್ ಸೆಂಗಾರ್‌ನ್ನು ಉಚ್ಛಾಟಿಸಿದ ಬಿಜೆಪಿ
ಸ್ವಾತಂತ್ರ್ಯದಿನದ ಜಾಹೀರಾತಿನಲ್ಲಿ ಉನ್ನಾವ್ ಅತ್ಯಾಚಾರ ಆರೋಪಿ ಬಿಜೆಪಿ ಶಾಸಕ!

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT