ಬುಧವಾರ, ಜನವರಿ 22, 2020
18 °C

ಉನ್ನಾವ್‌ ಅತ್ಯಾಚಾರ ಸಂತ್ರಸ್ತೆ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಶುಕ್ರವಾರ ರಾತ್ರಿ ಸಾವಿಗೀಡಾಗಿದ್ದಾರೆ.

ರಾಯಬರೇಲಿ ನ್ಯಾಯಾಲಯಕ್ಕೆ ಬರುತ್ತಿದ್ದ ವೇಳೆ ಐವರು ದುಷ್ಕರ್ಮಿಗಳು ಗುರುವಾರ ಬೆಳಿಗ್ಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದರು. ಶೇಕಡ 90ರಷ್ಟು ಸುಟ್ಟ ಗಾಯಗಳಿಂದಾಗಿ ಗಂಭೀರ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಶುಕ್ರವಾರ ಸಂಜೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ರಾತ್ರಿ 11.10ಕ್ಕೆ ಹೃದಯಾಘಾತವಾಯಿತು. ಬದುಕಿಸಲು ಎಲ್ಲ ರೀತಿಯ ಪ್ರಯತ್ನ ಕೈಗೊಳ್ಳಲಾಗಿತ್ತು. ಆದರೆ, 11.40ಕ್ಕೆ ನಿಧನರಾದರು’ ಎಂದು ಆಸ್ಪತ್ರೆಯ ವೈದ್ಯ ಡಾ. ಶಲಾಬ್‌ ಕುಮಾರ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು