ಶುಕ್ರವಾರ, ಏಪ್ರಿಲ್ 3, 2020
19 °C

ಉನ್ನಾವ್ ಅತ್ಯಾಚಾರ ಪ್ರಕರಣ ತ್ವರಿತ ನ್ಯಾಯಾಲಯಕ್ಕೆ : ಯೋಗಿ ಆದಿತ್ಯನಾಥ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟ ಉನ್ನಾವ್‌ ಅತ್ಯಾಚಾರ ಸಂತ್ರಸ್ತೆ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಒಪ್ಪಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಶನಿವಾರ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಸಾವು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ. ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ ಎಂದು ಹೇಳಿದರು.

ಸರ್ಕಾರವು ಪ್ರಕರಣವನ್ನು ತ್ವರಿತ ನ್ಯಾಯಾಲಯಕ್ಕೆ ಒಪ್ಪಿಸುತ್ತದೆ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ಇತರೆ ಬಿಜೆಪಿ ಮುಖಂಡರು ಕೂಡ ಸಂತಾಪ ಸೂಚಿಸಿದ್ದಾರೆ.

ಶೇ. 90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ 23 ವರ್ಷದ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯನ್ನು ಏರ್ ಲಿಫ್ಟ್‌ ಮೂಲಕ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಏರ್‌ಲಿಫ್ಟ್‌ ಆದ 40 ಗಂಟೆಗಳ ಬಳಿಕ ಹೃದಯಾಘಾತದಿಂದಾಗಿ ಸಂತ್ರಸ್ತೆಯು ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದಾರೆ. 

ಇದನ್ನೂ ಓದಿ: 

ಬಳಿಕ ಸಂತ್ರಸ್ತೆಯ ಮೃತದೇಹವನ್ನು ಆಸ್ಪತ್ರೆಯ ಮರಣೋತ್ತರ ವಿಭಾಗಕ್ಕೆ ರವಾನಿಸಲಾಯಿತು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಪರೀಕ್ಷೆಯ ವರದಿಯನ್ನು ಪೊಲೀಸರಿಗೆ ನೀಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಇದನ್ನೂ ಓದಿ: ಉನ್ನಾವ್ ಅತ್ಯಾಚಾರ| ಬೆಂಕಿಯಲ್ಲಿ ಉರಿಯುತ್ತಲೇ 1 ಕಿ.ಮೀ ಓಡಿದ್ದ ಸಂತ್ರಸ್ತೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು