ಬುಧವಾರ, ಜುಲೈ 15, 2020
22 °C

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಅಧಿಕಾರಿಯಿಂದ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

ಬಂದಾ (ಉತ್ತರ ಪ್ರದೇಶ): ಕಂದಾಯ ಅಧಿಕಾರಿ ಹಾಗೂ ಇತರ ಇಬ್ಬರು ಸೇರಿ 18 ವರ್ಷದ ಯುವತಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ಯುವತಿ ನೀಡಿದ ದೂರಿನ ಪ್ರಕಾರ, ಕಂದಾಯ ಅಧಿಕಾರಿ ಸುಶಿ ಪಟೇಲ್ ಹಾಗೂ ಇತರ ಇಬ್ಬರು ಶನಿವಾರ ಯುವತಿ ಮನೆಗೆ ನುಗ್ಗಿ ಕಾರಿನಲ್ಲಿ ಎಳೆದೊಯ್ದಿದ್ದಾರೆ. ಈ ವೇಳೆ ತಡೆಯಲು ಬಂದ ತಾಯಿಯನ್ನು ಆರೋಪಿಗಳು ತಳ್ಳಿದ್ದಾರೆ. ಕಾರಿನಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಠಾಣಾಧಿಕಾರಿ ಗಿರೀಂದ್ರ ಸಿಂಗ್ ಹೇಳಿದ್ದಾರೆ. 

‘ಮಾರ್ಗಮಧ್ಯೆ ರಸ್ತೆಯಲ್ಲಿ ಕುರಿಹಿಂಡು ಎದುರಾದಾಗ, ಕಾರಿನಿಂದ ಇಳಿದು ತಪ್ಪಿಸಿಕೊಂಡು ಓಡಿಬಂದೆ’ ಎಂದು ಯುವತಿ ತಿಳಿಸಿದ್ದಾಳೆ.

ಆಕೆ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು