ಸೋಮವಾರ, ಜೂನ್ 14, 2021
26 °C

ಸಿಎಎ ವಿರೋಧಿಗಳ ಹೆಸರುಗಳ ಫಲಕ ಪ್ರದರ್ಶಿಸಿದ ಉತ್ತರ ಪ್ರದೇಶ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಗೆ ಸಂಬಂಧಿಸಿದ ಮೊಕದ್ದಮೆ ದಾಖಲಿಸಲಾಗಿರುವ 57 ಮಂದಿಯ ಹೆಸರು, ವಿವರಗಳನ್ನು ಒಳಗೊಂಡ ಬೃಹತ್‌ ಫಲಕಗಳನ್ನು ಆಯಕಟ್ಟಿನ ವೃತ್ತಗಳು, ಪ್ರಮುಖ ರಸ್ತೆಗಳಲ್ಲಿ ಉತ್ತರ ಪ್ರದೇಶ ಸರ್ಕಾರ ಪ್ರದರ್ಶಿಸಿದೆ.

ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ದ ಪೊಲೀಸ್ ಬಲ ಬಳಕೆಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳಲ್ಲಿ ಕೋರ್ಟ್‌ನಿಂದ ಟೀಕೆ ವ್ಯಕ್ತವಾಗಿರುವ ಬೆಳವಣಿಗೆಗಳ ನಂತರವೂ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

ಲಖನೌನ ಸ್ಥಳೀಯ ಆಡಳಿತ ಈ ಫಲಕಗಳನ್ನು ಅಳವಡಿಸಿದೆ. ಈ ಮಧ್ಯೆ, ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದ ಸಾರ್ವಜನಿಕ ಆಸ್ತಿ ನಷ್ಟ ಕುರಿತು ₹ 1.55 ಕೋಟಿ ವಸೂಲಿಗೆ ಸಂಬಂಧಿಸಿ ಈಗಾಗಲೇ ಈ ಎಲ್ಲರಿಗೂ ನೋಟಿಸ್ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ, ಸ್ಥಳೀಯ ಆಡಳಿತ ಪ್ರಕಟಿಸಿರುವ ಬೃಹತ್ ಫಲಕಗಳಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಎಸ್.ಆರ್‌.ದರಪುರಿ ಅವರ ಹೆಸರೂ ಇದೆ. ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಸ್ಥಳೀಯ ಆಡಳಿತ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು